You are here
Home > Koppal News > ನ.೨೫ ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ನ.೨೫ ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

 ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನ.೨೫ ರಂದು ಬೆಳಿಗ್ಗೆ ೧೦.೩೦ ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
 ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಜನಪದ ನೃತ್ಯ, ಜನಪದ ಗೀತೆ, ನಾಟಕ (ಹಿಂದಿ ಅಥವಾ ಇಂಗ್ಲೀಷ್), ಭರತನಾಟ್ಯ, ತಬಲಾ ಸೋಲೋ, ಕೊಳಲು, ಶಾಸ್ತ್ರೀಯ ಸಂಗೀತ, ವೀಣಾ, ಆಶು ಭಾಷಣ, ಶಾಸ್ತ್ರೀಯ ಸಂಗೀತ, ಕುಚುಪುಡಿ ನೃತ್ಯ, ಗಿಟಾರ್ ಸೋಲೊ, ಹಾರ್ಮೊನಿಯಂ, ಸಿತಾರ್ ಸೋಲೋ, ಸೇರಿದಂತೆ ಒಟ್ಟು ೧೬ ಕಲೆಗಳ ಸ್ಪರ್ಧೆಗಳನ್ನು ವೈಯಕ್ತಿಕ ಹಾಗೂ ಗುಂಪು ವಿಭಾಗಗಳಲ್ಲಿ ಏರ್ಪಡಿಸಲಾಗಿದೆ. ಯುವಜನೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಯುವಕ-ಯುವತಿಯರು, ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ೧೬ ರಿಂದ ೩೫ ವರ್ಷ ವಯೋಮಿತಿಯೊಳಗಿನವರು ಮಾತ್ರ ಭಾಗವಹಿಸಬಹುದಾಗಿದೆ. ನ.೨೫ ರ ಬೆಳಿಗ್ಗೆ ೯.೦೦ ಗಂಟೆಯೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಇವರಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿಗಳಾದ ಗಂಗಾವತಿ : ತಿಪ್ಪಯ್ಯ ಸ್ವಾಮಿ ಹಿರೇಮಠ- ೯೦೦೮೩೬೩೬೭೦, ಕೊಪ್ಪಳ : ಎನ್.ಎಸ್.ಪಾಟೀಲ್-೯೯೮೦೮೫೨೭೩೫, ಕುಷ್ಟಗಿ ಮಲ್ಲಿಕಾರ್ಜುನ-೯೬೬೩೦೫೮೬೬೦ ಹಾಗೂ ಯಲಬುರ್ಗಾ ಹನುಮಂತಪ್ಪ-೮೯೭೦೨೮೮೮೫೭ ಅಥವಾ ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆ ೦೮೫೩೯-೨೦೧೪೦೦ಗೆ ಸಂಪರ್ಕಿಸುವಂತೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Leave a Reply

Top