fbpx

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ : ಅ.೧೦ ರಂದು ಕಾನೂನು ವಿದ್ಯಾ ಪ್ರಸಾರ

  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರೋಟರಿ ಕ್ಲಬ್ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.೧೦ ರಂದು ಬೆಳಿಗ್ಗೆ ೯.೩೦ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ವಿಶೇಷ ಕಾನೂನು ವಿದ್ಯಾ ಪ್ರಸಾರ ಕಾರ್ಯಕ್ರಮ ಜರುಗಲಿದೆ. 
  ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಕಾಂತ ದಾ.ಬಬಲಾದಿ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕೆ.ಪಿ.ಮೋಹನ್‌ರಾಜ್ ಅವರು ವಹಿಸುವರು.  ಮುಖ್ಯ ಅತಿಥಿಗಳಾಗಿ ಹಿರಿಯ ವ್ಯವಹಾರ ನ್ಯಾಯಾಧೀಶರಾದ ಬಸವರಾಜ ಚೇಗರಡ್ಡಿ, ಕಿರಿಯ ವ್ಯವಹಾರ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ಕಾವೇರಿ, ಲಾ ಅಕಾಡೆಮಿ ಅಧ್ಯಕ್ಷರು ಹಾಗೂ ರಾಜ್ಯ ವಕೀಲರ ಪರಿಷತ್ ಸದಸ್ಯರಾದ ಸಂಧ್ಯಾ ಬಿ.ಮಾದಿನೂರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ, ಜಿಲ್ಲಾ ಸರ್ಕಾರಿ ವಕೀಲರಾದ ವಿ.ಎಂ.ಭೂಸನೂರಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಹದೇವಸ್ವಾಮಿ, ರೋಟರಿ ಕ್ಲಬ್ ಅಧ್ಯಕ್ಷೆ ಇಂದಿರಾ ಭಾವಿಕಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಹೆಚ್.ವೀರಣ್ಣ ಅವರು ಭಾಗವಹಿಸುವರು.
ವಿಶೇಷ ಉಪನ್ಯಾಸಕರಾಗಿ ಜಿಲ್ಲಾ ಆಸ್ಪತ್ರೆಯ ಮನೋವೈದ್ಯರಾದ ಡಾ.ಕೃಷ್ಣ ವಿ.ಓಂಕಾರ್ ಅವರು ತೀವ್ರತರವಾದ ಮಾನಸಿಕ (ಸ್ಕಿಜೋಫ್ರಿನಿಯಾ) ಕಾಯಿಲೆಯ ಕುರಿತು ಮತ್ತು ಮಾನಸಿಕ ಆರೋಗ್ಯ ಅಧಿಕಾರಿ ಡಾ.ಎಂ.ಎಂ.ಕಟ್ಟಿಮನಿ ಅವರು ಮಾನಸಿಕ ರೋಗದ ಮುಂಜಾಗ್ರತೆಯ ಕ್ರಮದ ಬಗ್ಗೆ ಉಪನ್ಯಾಸ ನೀಡುವರು.
Please follow and like us:
error

Leave a Reply

error: Content is protected !!