You are here
Home > Koppal News > ನಾಳೆ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ

ನಾಳೆ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ

೨೦೧೪-೧೫ನೇ ಸಾಲಿನ  ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವನ್ನು  ಜನೇವರಿ ೧೨ ರಿಂದ  ಜನೇವರಿ ೧೯ ರ ವರೆಗೆ ಆಚರಿಸಲಾಗುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಗೂ ಜಿಲ್ಲಾ ಯುವ ಸಂಘಗಳ ಒಕ್ಕೂಟ ಮತ್ತು ಜಿಲ್ಲೆಯ ಯುವಕ/ಯುವತಿ ಸಂಘಗಳ ಆಶ್ರಯದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಜನೇವರಿ ೧೨ ರಂದು ಬೆಳಿಗ್ಗೆ ೯-೩೦ ಗಂಟೆಗೆ ಕೊಪ್ಪಳ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 
ಸಮಾರಂಭದ ಸಾನಿಧ್ಯವನ್ನು ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಪರಮಪೂಜ್ಯ ಶ್ರೀ ಚೈತನ್ಯಾನಂದ ಮಹಾಸ್ವಾಮಿಗಳು ವಹಿಸಿಕೊಳ್ಳುವರು. ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿಯವರು  ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳರವರು ಅಧ್ಯಕ್ಷತೆ ವಹಿಸಿಕೊಳ್ಳುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಸಂಸದರು, ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಮುಂತಾದವರು ಭಾಗವಹಿಸುವರು.
ವಿಶೇಷ ಅತಿಥಿಗಳಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಜಮ್ಮನ್ನವರ, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎಸ್.ಬಿ.ರಾಜೂರು, ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯರಾದ ಎಸ್.ಬಿ.ಶಾಂತಪ್ಪನವರು, ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರರಾದ ಡಾ|| ವಿ.ಬಿ.ರಡ್ಡೇರ, ಬಾಲಕರ ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯರಾದ ಎ.ಕೆ.ತುಪ್ಪದ, ಸಿ.ವಿ ಚಂದ್ರಶೇಖರ, ಸಿದ್ದಲಿಂಗಯ್ಯ ಹಿರೇಮಠ ಭಾಗವಹಿಸುವರು. ಶ್ರೀ ಗವಿಸಿದ್ದೇಶ್ವರ ಕಾಲೇಜಿನ ಪ್ರಾಧ್ಯಾಪಕರಾದ ಶರಣಬಸಪ್ಪ ಬಿಳಿಎಲೆ ವಿಶೇಷ ಉಪನ್ಯಾಸ ನೀಡುವರು. 

Leave a Reply

Top