ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ-ರಾಘವೇಂದ್ರ ಹಿಟ್ನಾಳ

ಕೊಪ್ಪಳ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಮತದಾರರಲ್ಲಿ ಮನವಿ ಮಾಡಿದರು.
ಅವರು ಭಾನುವಾರ ತಾಲೂಕಿನ ಹಿಟ್ನಾಳ ಹಾಗೂ ಹೊಸಬಂಡಿ ಹರ್ಲಾಪೂರ, ಹಳೆಬಂಡಿ ಹರ್ಲಾಪೂರ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ ಅವರು ನಂತರ ಮತದಾರರನ್ನುದ್ದೇಶಿಸಿ ಮಾತನಾಡಿದರು.
ಹೈದರಾಬಾದ್-ಕರ್ನಾಟಕದ ಹಿಂದುಳಿದ ಜಿಲ್ಲೆಗಳ ಪೈಕಿ ಕೊಪ್ಪಳ ಜಿಲ್ಲೆಯೂ ಎಲ್ಲ ರಂಗಗಳಲ್ಲೂ ತೀರಾ ಹಿಂದುಳಿದಿದೆ. ಈ ಭಾಗದ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಜಿಲ್ಲೆ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ.
ಈ ಅಸಮತೋಲನ ನಿವಾರಣೆಯಾಗಬೇಕಾದಲ್ಲಿ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದಾಗ ಮಾತ್ರ ಕೊಪ್ಪಳ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಕಾಣಲು ಸಾಧ್ಯ ಎಂದ ಅವರು, ಕೊಪ್ಪಳ ಕ್ಷೇತ್ರದಲ್ಲಿ ಸಂಗಣ್ಣ ಕರಡಿ ನಾಲ್ಕು ಭಾರಿ ಶಾಸಕರಾದರೂ ಕೂಡ ಕ್ಷೇತ್ರ ಅಭಿವೃದ್ಧಿಯಲ್ಲಿ ಯಾಕೆ ಹಿಂದುಳಿಯಿತು ಎಂದು ಪ್ರಶ್ನಿಸಿದರು.
ಈ ಭಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಕ್ಷೇತ್ರದ ಮತದಾರರು ತಮಗೆ ಆರ್ಶೀವಧಿಸಿ ಕಳಿಸಿದಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರವನ್ನು ಮಾದರಿಯ ಕ್ಷೇತ್ರವನ್ನಾಗಿಸುವುದಾಗಿ ಅವರು ಮತದಾರರಿಗೆ ಭರವಸೆ ನೀಡಿದರು.

Related posts

Leave a Comment