ಕೊನೆಗೂ ಕೊಪ್ಪಳಕ್ಕೆ ತಂಗಡಗಿ ಆಗಮನ

 ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸಣ್ಣ ನೀರಾವರಿ ಸಚಿವ

ಶಿವರಾಜ್ ಎಸ್. ತಂಗಡಗಿ ಅವರು ಜು. ೦೬ ಮತ್ತು ೦೭ ರಂದು ಎರಡು ದಿನಗಳ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

  ಸಚಿವರು ಜು. ೦೬ ರಂದು ಬೆಳಿಗ್ಗೆ ೯ ಗಂಟೆಗೆ ಮುನಿರಾಬಾದ್‌ನಿಂದ ಹುಲಿಗಿಗೆ ತೆರಳಿ ಶ್ರೀ ಹುಲಿಗೆಮ್ಮ ದೇವಿಯ ದರ್ಶನ ಪಡೆಯುವರು.  ನಂತರ ಕೊಪ್ಪಳಕ್ಕೆ ಆಗಮಿಸಿ ಶ್ರೀ ಗವಿಮಠಕ್ಕೆ ಭೇಟಿ ನೀಡುವರು, ನಂತರ ಕೊಪ್ಪಳದಲ್ಲಿನ ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ.  ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜರುಗುವ ಕೆ.ಡಿ.ಪಿ. ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು.  ಸಚಿವರು ಅದೇ ದಿನ ಸಂಜೆ ೬ ಗಂಟೆಗೆ ಕಾರಟಗಿಗೆ ತೆರಳಿ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ವಿಚಾರಣೆ ನಡೆಸಿ, ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು.  ಜು. ೦೭ ರಂದು ಸಂಜೆ ೬ ಗಂಟೆಗೆ ಕಾರಟಗಿಯಿಂದ ಹೊಸಪೇಟೆ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

ಸಂಪುಟದಿಂದ ತಂಗಡಗಿ ಕೈಬಿಡಲ್ಲ: ಸಿದ್ದರಾಮಯ್ಯ

ಬೆಂಗಳೂರು: ಕೊಪ್ಪಳ ಜಿಲ್ಲಾಧಿಕಾರಿ ಮೇಲೆ ಪ್ರಭಾವ ಬೀರಿದ್ದಲ್ಲದೆ, ಅವರ ವರ್ಗಾವಣೆಗೆ ಕಾರಣರಾದ ಆರೋಪ ಎದುರಿಸುತ್ತಿರುವ ಸಚಿವ ಶಿವರಾಜ್ ತಂಗಡಗಿ ಅವರನ್ನು ಸಂಪುಟದಿಂದ ಕೈಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
-ಕೃಪೆ ಕನ್ನಡಪ್ರಭ

Leave a Reply