You are here
Home > Koppal News > ಎಸ್‌ಎಸ್‌ಎಲ್‌ಸಿ ಪರೀಕ್ಷೆ : ೮೦೬ ವಿದ್ಯಾರ್ಥಿಗಳು ಗೈರು

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ೮೦೬ ವಿದ್ಯಾರ್ಥಿಗಳು ಗೈರು

ಕೊಪ್ಪಳ,  : ಕೊಪ್ಪಳ ಜಿಲ್ಲೆಯಲ್ಲಿ ಸೋಮವಾರದಂದು ಜರುಗಿದ ಎಸ್‌ಎಸ್‌ಎಲ್‌ಸಿ ಗಣಿತ ವಿಷಯದ ಪರೀಕ್ಷೆಗೆ ೧೬೯೧೦ ವಿದ್ಯಾರ್ಥಿಗಳು ಹಾಜರಾಗಿದ್ದು, ೮೦೬ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
  ಜಿಲ್ಲೆಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಗಣಿತ ವಿಷಯದ ಪರೀಕ್ಷೆಗೆ ದಾಖಲಾತಿಯಾಗಿದ್ದ ೧೭೨೨೮ ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ ೧೬೪೭೬ ಹಾಗೂ ೪೮೮ ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ ೪೩೪ ಅಭ್ಯರ್ಥಿಗಳು ಹಾಜರಾಗಿದ್ದಾರೆ. ೭೫೨ ರೆಗ್ಯುಲರ್ ಹಾಗೂ ೫೪ ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಒಟ್ಟು ೮೦೬ ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ.  ಜಿಲ್ಲೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ಯಾಮಸುಂದರ್ ತಿಳಿಸಿದ್ದಾರೆ.

Leave a Reply

Top