ವಿಕಲಚೇತನರಿಗೆ ವಿವಿಧ ಸೌಲಭ್ಯ ಅರ್ಜಿ ಆಹ್ವಾನ.

ಕೊಪ್ಪಳ, ಫೆ.೨೩ (ಕ ವಾ) ಗಂಗಾವತಿ ನಗರಸಭೆ ಕಾರ್ಯಾಲಯದ ವತಿಯಿಂದ ಪ್ರಸಕ್ತ ಸಾಲಿನ ಶೇಕಡಾ ೩% ರ ಯೋಜನೆಯ ಎಸ್.ಎಫ್.ಸಿ ಅನುದಾನದಲ್ಲಿ ವಿಕಲಚೇತನರಿಗಾಗಿ ಅಡುಗೆ ಅನಿಲ ಸಂಪರ್ಕ, ಶ್ರವಣ ಸಾಧನ ಹಾಗೂ ತ್ರಿಚಕ್ರ ಸೈಕಲ್ ಇವುಗಳನ್ನು ಒದಗಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
     ಗಂಗಾವತಿ ನಗರ ಪ್ರದೇಶದ ನಿವಾಸಿಗಳಿಗೆ ಮಾತ್ರ ಈ ಸೌಲಭ್ಯವನ್ನು ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲಿಚ್ಛಿಸುವವರು ಭರ್ತಿ ಮಾಡಿದ ಅರ್ಜಿಯೊಂದಿಗೆ ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿದ ರೇಷನ್ ಕಾರ್ಡ್, ಐ.ಡಿ ಕಾರ್ಡ್, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿಕಲಚೇತನದ ಬಗ್ಗೆ ವೈದ್ಯಕೀಯ ಪ್ರಮಾಣಪತ್ರ ಇತ್ಯಾದಿ ದಾಖಲೆಗಳನ್ನು ಲಗತ್ತಿಸಿ, ಮಾ.೦೯ ರೊಳಗಾಗಿ ನಗರಸಭೆ ಕಛೇರಿ, ಗಂಗಾವತಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಅವಧಿ ಮೀರಿ ಬಂದಂತಹ ಅರ್ಜಿಗಳನ್ನು ಯಾವುದೇ ಹಿಂಬರಹ ನೀಡದೇ ತಿರಸ್ಕರಿಸಲಾಗುವುದು.   ಹೆಚ್ಚಿನ ಮಾಹಿತಿಗಾಗಿ ಗಂಗಾವತಿ ನಗರಸಭೆ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತ ಸಿ.ಆರ್.ರಂಗಸ್ವಾಮಿ ಅವರು ತಿಳಿಸಿದ್ದಾರೆ.
Please follow and like us:
error