ಹಿರಿಯ ನಾಗರಿಕರ ಯೋಗಕ್ಷೇಮ ಕೇಂದ್ರ ಸಂಸ್ಥೆಗಳಿಂದ ಅರ್ಜಿ ಆಹ್ವಾನ.

ಕೊಪ್ಪಳ, ಜು.೧೫  ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಕೊಪ್ಪಳದಲ್ಲಿ ಹಿರಿಯ ನಾಗರಿಕರಿಗಾಗಿ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
     ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಯನ್ನು ಒಳಗೊಂಡಂತೆ ಗಣನೀಯ ಸೇವೆ ಸಲ್ಲಿಸಿದ, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ಆರ್ಥಿಕವಾಗಿ ಸದೃಢವಾಗಿರುವ ಅರ್ಹ ಸಂಸ್ಥೆಗಳು, ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಸಂಸ್ಥೆಗಳು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾ ಆಸ್ಪತ್ರೆ ಆವರಣ ಇವರಿಂದ ಪಡೆದು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ, ದ್ವಿಪ್ರತಿಯಲ್ಲಿ ಆಗಸ್ಟ್ ೦೫ ರೊಳಗಾಗಿ ಸಲ್ಲಿಸಬಹುದಾಗಿದೆ. ಸಂಸ್ಥೆಗೆ ಇರಬೇಕಾದ ಅರ್ಹತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: ೦೮೫೩೯-೨೨೦೫೯೬ ನ್ನು ಸಂಪರ್ಕಿಸಬಹುದು.

Leave a Reply