ತಾಲೂಕು ಸಮಿತಿ ರಚನೆ : ಆಸಕ್ತರಿಗೆ ಆಹ್ವಾನ

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಅಲ್ಪಸಂಖ್ಯಾತರ ಜನಾಂಗದ ಕುಂದುಕೊರತೆಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ಮತ್ತು ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಲು ತಾಲೂಕು ಮಟ್ಟದ ಸಮಿತಿ ರಚಿಸಲಾಗುತ್ತಿದ್ದು, ಆಸಕ್ತರು ತಮ್ಮ ವಿವರವನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
  ಪ.ಜಾತಿ, ಪ.ವರ್ಗ ಮತ್ತು ಅಲ್ಪಸಂಖ್ಯಾತರ ಜನಾಂಗದ ಕುಂದುಕೊರತೆಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ಮತ್ತು ಸರ್ಕಾರದ ಕಾರ್ಯಕ್ರಮಗಳನ್ನು ಸಂಬಂಧಿಸಿದ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಲು ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ, ಪ್ರತಿ ತಾಲೂಕಿಗೆ ಒಂದು ಸಮಿತಿ ರಚಿಸಲು ನಿರ್ಧರಿಸಲಾಗಿದೆ.  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸಮಿತಿಗೆ ಸೇರಬಯಸುವ ಆಸಕ್ತರು ತಮ್ಮ ಬಯೋಡಾಟಾವನ್ನು ಆಯಾ ತಾಲೂಕು ಸಮಾಜಕಲ್ಯಾಣಾಧಿಕಾರಿಗಳಿಗೆ ಹಾಗೂ ಅಲ್ಪಸಂಖ್ಯಾತರ ಸಮಿತಿಗೆ ಸೇರಬಯಸುವವರು ತಮ್ಮ ಬಯೋಡಾಟಾವನ್ನು ಸಂಬಂಧಿಸಿದ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳಿಗೆ ಡಿ. ೧೨ ರ ಒಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ತಿಳಿಸಿದ್ದಾರೆ.
Please follow and like us:
error