fbpx

ಜ.೦೬ ರಿಂದ ಬೀದರ್‌ನಲ್ಲಿ ಸೇನಾ ಭರ್ತಿ ರ್‍ಯಾಲಿ : ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ.

ಕೊಪ್ಪಳ, ನ.೨೧ (ಕರ್ನಾಟಕ ವಾರ್ತೆ)  ರಿಕ್ರೊಟ್‌ಮೆಂಟ್ ಆಫೀಸ್ ಪೋರ್ಟ ಬೆಳಗಾವಿ ಇವರಿಂದ ೨೦೧೬ರ ಜ.೦೬ ರಿಂದ ೧೬ ರವರೆಗೆ ಬೀದರ್ ಜಿಲ್ಲೆಯಲ್ಲಿ ಸೇನಾ ನೇಮಕಾತಿ (ಜನರಲ್ ಡ್ಯೂಟಿ) ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.
     ಕೊಪ್ಪಳ ಜಿಲ್ಲೆಯ ಅಭ್ಯರ್ಥಿಗಳು ಈ ಸೇನಾ ನೇಮಕಾತಿ ರ್‍ಯಾಲಿಯಲ್ಲಿ ಭಾಗವಹಿಸಬಹುದಾಗಿದ್ದು, ಅಭ್ಯರ್ಥಿಗಳು ನ.೦೭ ರಿಂದ ಡಿ.೨೨ ರವರೆಗೆ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬಾಗಲಕೋಟೆ, ದೂರವಾಣಿ ಸಂಖ್ಯೆ : ೦೮೩೫೪-೨೩೫೪೩೪ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು  ಬಾಗಲಕೋಟೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. 
ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ.
ಕೊಪ್ಪಳ, ನ.೨೧ (ಕರ್ನಾಟಕ ವಾರ್ತೆ) ಮಾಸಿಕ ಗೌರವಧನ ಪಡೆಯುತ್ತಿರುವ ಮಾಜಿ ಸೈನಿಕರು, ಅವಲಂಬಿತರು ಅವರ ಜೀವಿತಾ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಬಾಗಲಕೋಟೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ ಇವರಿಂದ ಸೂಚನೆ ನೀಡಲಾಗಿದೆ.
     ಪ್ರತಿ ವರ್ಷದ ನವೆಂಬರ್ ತಿಂಗಳಿನಲ್ಲಿ ಬ್ಯಾಂಕ್‌ನಿಂದ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರಿಂದ ಜೀವಿತ ಪ್ರಮಾಣ ಪತ್ರವನ್ನು ಬ್ಯಾಂಕ್ ಪ್ರಾಧಿಕಾರಗಳು ಪಡೆಯುವ ಪ್ರಕ್ರಿಯೆಯಂತೆ, ಪ್ರಪಂಚದ ಎರಡನೇ ಮಹಾಯುದ್ಧದ ಮಾಸಿಕ ಗೌರವಧನ ಪಡೆಯುತ್ತಿರುವ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು ತಮ್ಮ ಜೀವಿತ ಪ್ರಮಾಣ ಪತ್ರವನ್ನು ಪ್ರತಿ ವರ್ಷ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರಪಂಚದ ಎರಡನೇ ಮಹಾಯುದ್ಧದ ಮಾಸಿಕ ಗೌರವಧನ ಪಡೆಯುತ್ತಿರುವ ಬಾಗಲಕೋಟ ಮತ್ತು ಕೊಪ್ಪಳ ಜಿಲ್ಲೆಯಲ್ಲಿರುವ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು ತಮ್ಮ ಜೀವಿತ ಪ್ರಮಾಣ ಪತ್ರದ ನಿಗದಿತ ಫಾರ್ಮನ್ನು ನ.೨೫ ರೊಳಗಾಗಿ ಪಡೆದು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ, ಬಾಗಲಕೋಟ ಇವರಿಗೆ ಸಲ್ಲಿಸಬೇಕು. ಇಲ್ಲವಾದಲ್ಲಿ ಜೀವಿತ ಪ್ರಮಾಣ ಪತ್ರವನ್ನು ಸೂಕ್ತ ಸಮಯದಲ್ಲಿ ಸಲ್ಲಿಸದೇ ಇರುವ ಫಲಾನುಭವಿಗಳ ಮಾಸಿಕ ಗೌರವಧನವನ್ನು ಸ್ಥಗಿತಗೊಳಿಸಲಾಗುವುದು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬಾಗಲಕೋಟೆ, ದೂರವಾಣಿ ಸಂಖ್ಯೆ : ೦೮೩೫೪-೨೩೫೪೩೪ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು  ಬಾಗಲಕೋಟೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. 
ಪ್ರಧಾನ ಮಂತ್ರಿಗಳ ಶಿಷ್ಯವೇತನ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ.
ಕೊಪ್ಪಳ, ನ.೨೧ (ಕರ್ನಾಟಕ ವಾರ್ತೆ) ಬಾಗಲಕೋಟೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ ಇವರ ವತಿಯಿಂದ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿಗಳ ಶಿಷ್ಯವೇತನ ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.
     ವೃತ್ತಿಪರ ಪದವಿಗಳಾದ ಎಂಜನೀಯರಿಂಗ್, ಎಂಬಿಬಿಎಸ್, ಬಿಡಿಎಸ್, ಎಂಬಿಎ ಇನ್ನಿತರ ಪದವಿಗಳಿಗೆ ಪ್ರಸಕ್ತ ಸಾಲಿನಲ್ಲಿ ಬಾಗಲಕೋಟ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಪ್ರವೇಶ ಪಡೆದ ಮಾಜಿ ಸೈನಿಕರ ಮಕ್ಕಳಿಗೆ ಭಾರತ ಸರ್ಕಾರದ ರಕ್ಷಣಾ ಮಂತ್ರಾಲಯ, ಕೇಂದ್ರೀಯ ಸೈನಿಕ ಬೋರ್ಡ್, ನವದೆಹಲಿ ಇವರಿಂದ ಪ್ರಧಾನ ಮಂತ್ರಿಗಳ ಶಿಷ್ಯ ವೇತನ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲಿಚ್ಛಿಸುವವರು ಈ ಮೇಲ್ಕಾಣಿಸಿದ ಪದವಿಗಳ ಪ್ರವೇಶಕ್ಕೆ ನಿಗದಿಪಡಿಸಿದ ಶಿಕ್ಷಣದಲ್ಲಿ ಕನಿಷ್ಠ ಪ್ರತಿಶತ ೬೦ ರಷ್ಟು ಅಂಕಗಳನ್ನು ಹೊಂದಿರಬೇಕು. ನಿಗದಿತ ನಮೂನೆಯ ಹೊಸ ಅರ್ಜಿ ಫಾರ್ಮಗಳನ್ನು ವೆಬ್‌ಸೈಟ್ ವಿಳಾಸ hಣಣಠಿ//ತಿತಿತಿ.ಜesತಿ.gov.iಟಿ ನಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ನ.೨೫ ರೊಳಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬಾಗಲಕೋಟೆ ಇವರಿಗೆ ಸಲ್ಲಿಸಬಹುದಾಗಿದೆ. 
      ಹೆಚ್ಚಿನ ಮಾಹಿತಿಗಾಗಿ ರಕ್ಷಣಾ ಮಂತ್ರಾಲಯದ ದೂರವಾಣಿ ಸಂಖ್ಯೆ : ೦೧೧-೨೬೭೧೫೨೫೦ ನ್ನು ಅಥವಾ ವೆಬ್‌ಸೈಟ್ hಣಣಠಿ//ತಿತಿತಿ.ಜesತಿ.gov.iಟಿ ನ್ನು ಅಥವಾ ಉಪನಿರ್ದೇಶಕರ ಕಾರ್ಯಾಲಯ,  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬಾಗಲಕೋಟೆ, ದೂರವಾಣಿ ಸಂಖ್ಯೆ : ೦೮೩೫೪-೨೩೫೪೩೪ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು  ಬಾಗಲಕೋಟೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜವಾಹರಲಾಲ್ ನೆಹರೂ ಅವರ ಅಪರೂಪದ ಛಾಯಾಚಿತ್ರ ಪ್ರದರ್ಶನ ಮತ್ತು ವಿಚಾರಸಂಕಿರಣ.
ಕೊಪ್ಪಳ ನ. ೨೧ (ಕರ್ನಾಟಕ ವಾರ್ತೆ)  ನವಭಾರತದ ನಿರ್ಮಾತೃ ಹಾಗೂ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ೧೨೫ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನೆಹರೂ ರವರ ಸಾಧನೆ ಕುರಿತ ಅಪೂರ್ವ ಹಾಗೂ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ಕಾರ್ಯಕ್ರಮವನ್ನು ನ. ೨೩ ಮತ್ತು ೨೪ ರಂದು ಎರಡು ದಿನಗಳ ಕಾಲ ಕೊಪ್ಪಳದ ಸಾಹಿತ್ಯ ಭವನದಲ್ಲಿ ಆಯೋಜಿಸಿದೆ.
     ನೆಹರೂ ರವರ ಅಪರೂಪದ ಛಾಯಾಚಿತ್ರ ಪ್ರದರ್ಶನವನ್ನು ನ. ೨೩ ಮತ್ತು ೨೪ ರಂದು ಎರಡು ದಿನಗಳ ಕಾಲ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.  ಅಲ್ಲದೆ ನೆಹರೂ ಅವರ ಕುರಿತು ವಿಚಾರಸಂಕಿರಣವನ್ನು ನ. ೨೩ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ.  ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ಹಾಗೂ ವಿಚಾರಸಂಕಿರಣದ ಉದ್ಘಾಟನೆಯನ್ನು ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ನೆರವೇರಿಸುವರು.  ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ. ಶ್ಯಾಮಸುಂದರ್, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ್ ಪೂಜಾರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.  ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರಭುರಾಜ್ ನಾಯಕ್ ಅವರು ನೆಹರೂ ಅವರ ಜೀವನ ಸಾಧನೆ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ತಿಳಿಸಿದ್ದಾರೆ.
ಉದ್ಯೋಗ ಸೃಜನ ಯೋಜನೆ ನ.೨೫ ಮತ್ತು ೨೭ ರಂದು ಸಂದರ್ಶನ.
ಕೊಪ್ಪಳ, ನ.೨೧ (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೊದ್ಯೋಗ ಮಂಡಳಿ ಇವರಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಘಟಕ ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲಾದ ಅಭ್ಯರ್ಥಿಗಳಿಗೆ ಆಯ್ಕೆ ಸಂದರ್ಶನವನ್ನು ನ.೨೫ ಮತ್ತು ನ.೨೭ ರಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಛೇರಿ, ಕೊಪ್ಪಳದಲ್ಲಿ ಏರ್ಪಡಿಸಲಾಗಿದೆ.
ಯೋಜನೆಯಡಿ ಜಿಲ್ಲಾ ಕೈಗಾರಿಕಾ ಕೇಂದ್ರ (ಡಿಐಸಿ)ದ ಹೆಸರಿನಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ನ.೨೫ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಹಾಗೂ ಖಾದಿ ಗ್ರಾಮೋದ್ಯೋಗ ಮಂಡಳಿ (ಕೆವಿಐಬಿ) ಮತ್ತು ಖಾದಿ ಗ್ರಾಮೋದ್ಯೋಗ ಆಯೋಗ (ಕೆವಿಐಸಿ) ಹೆಸರಿನಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ನ.೨೭ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಅವಶ್ಯಕ ಮೂಲ ದಾಖಲಾತಿ ಮತ್ತು ದ್ವಿಪ್ರತಿ ನಕಲು ಪ್ರತಿಯೊಂದಿಗೆ ಸ್ವಂತ ಖರ್ಚಿನಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಛೇರಿ, ಕೊಪ್ಪಳದಲ್ಲಿ ಏರ್ಪಡಿಸಲಾಗಿರುವ ಆಯ್ಕೆ ಸಂದರ್ಶನದಲ್ಲಿ ಹಾಜರಾಗುವಂತೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಪ್ಪಳ ಮತ್ತು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು, ಕೊಪ್ಪಳ ಇವರು ಕೋರಿದ್ದಾರೆ.
ನ.೩೦ ರಂದು ಜಿಲ್ಲಾ ಪಂಚಾಯತ್ ಕೆ.ಡಿ.ಪಿ ತ್ರೈಮಾಸಿಕ ಸಭೆ.
ಕೊಪ್ಪಳ, ನ.೨೧ (ಕರ್ನಾಟಕ ವಾರ್ತೆ) : ಕೊಪ್ಪಳ ಜಿಲ್ಲಾ ಪಂಚಾಯತ್‌ನ ಪ್ರಸಕ್ತ ಸಾಲಿನ ೨ನೇ ತ್ರೈಮಾಸಿಕ ಕೆ.ಡಿ.ಪಿ ಸಭೆಯನ್ನು ನ.೩೦ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
     ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಅನುಷ್ಠಾನಾಧಿಕಾರಿಗಳು ೨೦೧೫ರ ಜುಲೈ ನಿಂದ ಸೆಪ್ಟಂಬರ್‌ವರೆಗಿನ ತಮ್ಮ ಇಲಾಖೆಯ ಭೌತಿಕ ಗುರಿ ಮತ್ತು ಸಾಧನೆಗಳ ಪ್ರಗತಿ ವರದಿಗಳನ್ನು ವಿವರವಾದ ಮಾಹಿತಿಯೊಂದಿಗೆ ಜಿಲ್ಲಾ ಪಂಚಾಯತ್ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಹಾಗೂ ಖುದ್ದಾಗಿ, ಸಮಯಕ್ಕೆ ಸರಿಯಾಗಿ ಸಭೆಗೆ ಹಾಜರಾಗುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ತಿಳಿಸಿದ್ದಾರೆ.

Please follow and like us:
error

Leave a Reply

error: Content is protected !!