ಪಿಯುಸಿ ಭೌತಶಾಸ್ತ್ರ, ಶಿಕ್ಷಣ ಪರೀಕ್ಷೆ : ೨೧೮೬ ವಿದ್ಯಾರ್ಥಿಗಳು ಹಾಜರು

ಕೊಪ್ಪಳ ಮಾ. ೧೯  : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶುಕ್ರವಾರದಂದು ಒಟ್ಟು ೧೪ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಭೌತಶಾಸ್ತ್ರ ಮತ್ತು ಶಿಕ್ಷಣ ವಿಷಯ ಪರೀಕ್ಷೆಗೆ ಕೊಪ್ಪಳ ಜಿಲ್ಲೆಯ ೨೧೮೬ ವಿದ್ಯಾರ್ಥಿಗಳು ಹಾಜರಾಗಿದ್ದು, ೧೨೭ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
  ಪಿಯುಸಿ ಪರೀಕ್ಷೆಯ ಭೌತಶಾಸ್ತ್ರ ವಿಷಯ ಪರೀಕ್ಷೆ ತೆಗೆದುಕೊಂಡಿರುವ ೧೦೧೪ ವಿದ್ಯಾರ್ಥಿಗಳ ಪೈಕಿ ೯೫೭ ವಿದ್ಯಾರ್ಥಿಗಳು ಹಾಜರಾಗಿದ್ದು, ೫೭ ವಿದ್ಯಾರ್ಥಿಗಳು ಗೈರಾಗಿದ್ದಾರೆ.  ಕೊಪ್ಪಳ ತಾಲೂಕಿನಲ್ಲಿ ೪೪೩ ವಿದ್ಯಾರ್ಥಿಗಳ ಪೈಕಿ ೪೨೩ ವಿದ್ಯಾರ್ಥಿಗಳು ಹಾಜರಾಗಿದ್ದು, ೨೦ ವಿದ್ಯಾರ್ಥಿಗಳು ಗೈರಾಗಿದ್ದಾರೆ.  ಗಂಗಾವತಿ ತಾಲೂಕಿನಲ್ಲಿ ೪೪೨ ವಿದ್ಯಾರ್ಥಿಗಳ ಪೈಕಿ ೪೨೩ ವಿದ್ಯಾರ್ಥಿಗಳು ಹಾಜರಿದ್ದು, ೧೯ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕುಷ್ಟಗಿ ತಾಲೂಕಿನಲ್ಲಿ ೩೭ ವಿದ್ಯಾರ್ಥಿಗಳ ಪೈಕಿ ೩೦ ಹಾಜರಿದ್ದು, ೦೭ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಯಲಬುರ್ಗಾ ತಾಲೂಕಿನಲ್ಲಿ ೯೨ ವಿದ್ಯಾರ್ಥಿಗಳ ಪೈಕಿ ೮೧ ವಿದ್ಯಾರ್ಥಿಗಳು ಹಾಜರಾಗಿದ್ದು, ೧೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
  ಶಿಕ್ಷಣ ವಿಷಯ ಪರೀಕ್ಷೆ ತೆಗೆದುಕೊಂಡಿರುವ ೧೨೯೯ ವಿದ್ಯಾರ್ಥಿಗಳ ಪೈಕಿ ೧೨೨೯ ವಿದ್ಯಾರ್ಥಿಗಳು ಹಾಜರಾಗಿದ್ದು, ೭೦ ವಿದ್ಯಾರ್ಥಿಗಳು ಗೈರಾಗಿದ್ದಾರೆ.  ಕೊಪ್ಪಳ ತಾಲೂಕಿನಲ್ಲಿ ೫೦೧ ವಿದ್ಯಾರ್ಥಿಗಳ ಪೈಕಿ ೪೭೯ ವಿದ್ಯಾರ್ಥಿಗಳು ಹಾಜರಾಗಿದ್ದು, ೨೨ ವಿದ್ಯಾರ್ಥಿಗಳು ಗೈರಾಗಿದ್ದಾರೆ.  ಗಂಗಾವತಿ ತಾಲೂಕಿನಲ್ಲಿ ೧೧೫ ವಿದ್ಯಾರ್ಥಿಗಳ ಪೈಕಿ ೧೧೧ ವಿದ್ಯಾರ್ಥಿಗಳು ಹಾಜರಿದ್ದು, ೦೪ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕುಷ್ಟಗಿ ತಾಲೂಕಿನಲ್ಲಿ ೩೮೧ ವಿದ್ಯಾರ್ಥಿಗಳ ಪೈಕಿ ೩೫೩ ಹಾಜರಿದ್ದು, ೨೮ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಯಲಬುರ್ಗಾ ತಾಲೂಕಿನಲ್ಲಿ ೩೦೨ ವಿದ್ಯಾರ್ಥಿಗಳ ಪೈಕಿ ೨೮೬ ವಿದ್ಯಾರ್ಥಿಗಳು ಹಾಜರಾಗಿದ್ದು, ೧೬ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು  ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಶಿಂಧಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Please follow and like us:

Leave a Reply