ಚರ್ಚಾ ಸ್ಪರ್ದೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಕೊಪ್ಪಳ-06-  ತಾಲೂಕಿನ ಕಾತರಕಿ ಗುಡ್ಲಾನೂರ  ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿ ಕುಮಾರಿ ಅಕ್ಷತಾ ಮಲ್ಲಯ್ಯ ಸಾಲಿಮಠ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ ಗುಲಬರ್ಗಾ ವಿಭಾಗ ಮಟ್ಟದ ಸಾಂಸ್ಕೃತಿಕ ಚಟುವಟಿಕೆಯ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ,
    ಈ ವಿದ್ಯಾರ್ಥಿನಿಯ ಸಾಧನೆಗೆ ಕೊಪ್ಪಳ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿದೆಶಕರು,  ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕನಗೌಡ್ರ, ಉಪಾಧ್ಯಕ್ಷ ಮಂಜುನಾಥ ಮೇಟಿ, ಮತ್ತು ಸದಸ್ಯರು, ಪ್ರಾಚಾರ್ಯರಾದ ಐ.ಎಮ್.ಚಿಕ್ಕರಡ್ಡಿ ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

Please follow and like us:
error