ಸದ್ಭಾವನಾ ದಿನ ಭಾವೈಕ್ಯ ಮತ್ತು ಸೌಹಾರ್ದತೆಯ ಪ್ರತಿಜ್ಞಾ ವಿಧಿ ಸ್ವೀಕಾರ.

ಕೊಪ್ಪಳ ಆ. ೨೬ (ಕ ವಾ) ಜಿಲ್ಲೆಯಲ್ಲಿ ಕೋಮು ಸೌಹಾರ್ದ ಪಾಕ್ಷಿಕ ಆಚರಣೆಯ ಅಂಗವಾಗಿ ಗುರುವಾರದಂದು ಸದ್ಭಾವನಾ ದಿನವನ್ನಾಗಿ ಆಚರಿಸಿದ ನಿಮಿತ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾವೈಕ್ಯ ಮತ್ತು ಸೌಹಾರ್ದತೆಯ ಪ್ರತಿಜ್ಞಾ ವಿಧಿಯನ್ನು ಎಲ್ಲ ಅಧಿಕಾರಿ, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸ್ವೀಕರಿಸಿದರು.
     ಸರ್ಕಾರದ ಆದೇಶದಂತೆ ಆ. ೨೦ ರಿಂದ ಸೆ. ೦೩ ರವರೆಗೆ ಕೋಮು ಸೌಹಾರ್ದ ಪಾಕ್ಷಿಕದ ಅಂಗವಾಗಿ ಗುರುವಾರದಂದು ಸದ್ಭಾವನಾ ದಿನವನ್ನಾಗಿ ಆಚರಿಸಲಾಯಿತು.  ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾ ವಿಧಿ ಬೊಧಿಸಿದ ಅಪರ ಜಿಲ್ಲಾಧಿಕಾರಿ ಡಾ. ಜಿ.ಎಲ್. ಪ್ರವೀಣ್ ಕುಮಾರ ಅವರು,  ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಭೇದ ಭಾವವಿಲ್ಲದೆ, ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರತಿಜ್ಞೆ ಮಾಡುತ್ತೇವೆ.  ಅಲ್ಲದೆ ವಯಕ್ತಿಕವಾಗಿಯಾಗಲಿ ಅಥವಾ ಸಾಮೂಹಿಕವಾಗಿಯಾಗಲಿ, ನಮ್ಮಲ್ಲಿರುವ ಎಲ್ಲ
     ಜಿಲ್ಲಾಧಿಕಾರಿ ರಮಣದೀಪ ಚೌದರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್,  ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿಗಳು, ಗಣ್ಯರಾದ ವೆಂಕಣ್ಣ ಯಾದವ್, ರವಿ ಕುರುಗೋಡ್ ಅಲ್ಲದೆ ಶಿವಾನಂದ ಹೊದ್ಲೂರ್, ಮಂಜುನಾಥ ಗೊಂಡಬಾಳ್, ಮಹಾಂತೇಶ್ ಮಲ್ಲನಗೌಡರ ಹಾಗೂ ವಿವಿಧ ಗಣ್ಯರು ಈ ಸಂದರ್ಭದಲ್ಲಿ ಪಾಲ್ಗೊಂಡು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ, ಸಮಾಲೋಚನೆ ಹಾಗು ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆಂದು ಪ್ರತಿಜ್ಞೆ ಮಾಡುವುದಾಗಿ ಪ್ರಮಾಣ ಸ್ವೀಕರಿಸಿದರು. 

Leave a Reply