೭೮ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ಲಾಸ್ಟಿಕ್ ನಿಷೇಧ

 : ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ
ಕೊಪ್ಪಳ : ಬರುವ ಡಿಸೆಂಬರ್ ೯, ೧೦ ಮತ್ತ ೧೧ ರಂದು ಜಿಲ್ಲೆಯ ಗಂಗಾವತಿಯಲ್ಲಿ ನಡೆಯಲಿರುವ ೭೮ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
  ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ಲಾಸ್ಟಿಕ್ ಬಳಕೆ, ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ, ವಿಂಗಡಣೆ, ಸಾಗಾಣಿಕೆ ಮತ್ತು ವಿಲೇವಾರಿ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಗಂಗಾವತಿ ನಗರದಲ್ಲಿ ಸಾರ್ವಜನಿಕರು ತಮ್ಮ ತಮ್ಮ ಮನೆಗಳ ಮುಂದೆ ರಂಗೋಲಿ, ದೀಪಾಲಂಕಾರ ಹಾಗೂ ಬಟ್ಟೆಯ ಕನ್ನಡ ಧ್ವಜಗಳನ್ನು ಹಾರಿಸಿ ಸಮ್ಮೇಳನಕ್ಕೆ ಶೋಭೆ ತರಬೇಕು.  ನಗರದಲ್ಲಿ ಮನೆಗಳ ಗೋಡೆಗಳಿಗೆ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಭಿತ್ತಿ ಚಿತ್ರ ಹಾಗೂ ಪ್ರಚಾರದ ಬರಹಗಳನ್ನು ಬರೆಯುವಾಗ ಸಂಬಂಧಿಸಿದ ಮನೆಯ ಮಾಲೀಕರಿಂದ ಲಿಖಿತ ಅನುಮತಿ ಪಡೆಯಬೇಕು.  ಸರ್ಕಾರಿ ಕಚೇರಿಗಳ ಗೋಡೆಗಳಿಗೆ ಯಾವುದೇ ರೀತಿಯಲ್ಲಿ ಪ್ರಚಾರದ ಬರಹಗಳನ್ನು ಬರೆಯುವುದು ಹಾಗೂ ಭಿತ್ತಿ ಚಿತ್ರಗಳನ್ನು ಅಂಟಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು  ತಿಳಿಸಿದ್ದಾರೆ.
gangavathi sammelana plastic ban

Leave a Reply