ಪ್ರಾಥಮಿಕ ಶಿಕ್ಷಣದಲ್ಲಿ ದೇಶಿ ಭಾಷೆಗೆ ಆಧ್ಯತೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು,   :   ಪ್ರಾಥಮಿಕ ಶಿಕ್ಷಣದಲ್ಲಿ ದೇಶೀಯ ಭಾಷೆಗೆ ಆಧ್ಯತೆ ದೊರೆಯಬೇಕು ಎಂದು ಮನವಿ ಮಾಡಲು ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಡಾ. ಚಂದ್ರಶೇಖರ್ ಕಂಬಾರ ಅವರ ನೇತೃತ್ವದ ನಿಯೋಗವು ಮಾತೃ ಭಾಷಾ ದಿನವಾದ ಫೆಬ್ರವರಿ 21 ರಂದು ದೆಹಲಿಗೆ ತೆರಳಿ ರಾಷ್ಟ್ರಪತಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ   ಸಿದ್ದರಾಮಯ್ಯ  ಇಂದು ಇಲ್ಲಿ ತಿಳಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಬೆಂಗಳೂರು ವಿಭಾಗ ಮಟ್ಟದ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಫಾಟಿಸಿ ಮಾತನಾಡಿದ ಮುಖ್ಯಮಂತ್ರಿ ಅವರು ಪ್ರಾಥಮಿಕ ಶಿಕ್ಷಣದಲ್ಲಿ ಆಯಾ ಪ್ರಾದೇಶಿಕ ಭಾಷೆಗಳಿಗೆ ಆಧ್ಯತೆ ದೊರೆಯಬೇಕು ಎಂಬುದು ನಮ್ಮ ಸರ್ಕಾರದ ನಿಲುವಾಗಿದ್ದು, ಈ ಸಂಬಂಧ ನಾನು ಈಗಾಗಲೇ ಇತರ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಈ ಬಗ್ಗೆ ಪತ್ರ ಬರೆದಿರುವುದಾಗಿ ತಿಳಿಸಿದರು.
ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದರೆ ಮಾತ್ರ ತಮ್ಮ ಮಕ್ಕಳಿಗೆ ಉಜ್ವಲ ಭವಿಷ್ಯ ಇದೆ ಎಂಬ ಭ್ರಮೆ ಬೇಡ, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಹಾಗೆಯೇ ಭಾರತರತÀ್ನ ಪ್ರಶಸ್ತಿ ಪುರಸ್ಕøತ  ಸಿ.ಎನ್. ರಾವ್ ಅವರು ವಿಶ್ವ ವಿಖ್ಯಾತಿ ಪಡೆದಿದ್ದಾರೆ ಎಂದ ಮುಖ್ಯಮಂತ್ರಿ ಅವರು ಗ್ರಾಮೀಣ ಪ್ರದೇಶಗಳಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರು ಐ.ಎ.ಎಸ್., ಐ.ಪಿ.ಎಸ್., ವೈದ್ಯರು ಹಾಗೂ ಎಂಜಿನೀಯರುಗಳಾಗಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಆದ್ದರಿಂದ ಪೋಷಕರು ತಮ್ಮಲ್ಲಿರುವ ಆಂಗ್ಲ ಭಾಷಾ ವ್ಯಾಮೋಹವನ್ನು ತೊರೆಯಬೇಕು ಎಂದರು.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಇನ್ನು ಹೆಚ್ಚಿಸಬೇಕು ಎಂದ ಮುಖ್ಯಮಂತ್ರಿಗಳು  ಮಾತೃಭಾಷೆಯಲ್ಲಿ ಶಿಕ್ಷಣ ಪಡೆದಲ್ಲಿ ಜ್ಞಾನಾರ್ಜನೆ ಹೆಚ್ಚುತ್ತದೆ.  ಆದ್ದರಿಂದ ಪ್ರಾಥಮಿಕ ಶಿಕ್ಷಣ ಕನ್ನಡದಲ್ಲಿ ಇರಲಿ.   ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಆಂಗ್ಲ ಭಾಷೆಯನ್ನು ಒಂದು ಭಾಷೆಯಾಗಿ ಕಲಿತರೆ ಯಾವ ಅಭ್ಯಂತರವಿಲ್ಲ ಎಂದು ಹೇಳಿದರು.
ದೇಶೀಯ ಭಾಷೆ ಉಳಿವಿಗಾಗಿ ನಾವೆಲ್ಲರೂ ಒಗ್ಗೂಡಬೇಕು ಎಂದು ಮಾತನಾಡಿದ ಜ್ಞಾನಪೀಠ ಪುರಸ್ಕøತ ಡಾ. ಚಂದ್ರಶೇಖರ ಕಂಬಾರ ಅವರು ವಿಜ್ಞಾನÀದ ವಿಷಯಗಳನ್ನು ಓದಲು ಅನುಕೂಲವಾಗುವಂತೆ ವಿಜ್ಞಾನದ ಕೋಶವನ್ನು ಕನ್ನಡದಲ್ಲಿ ತರುವ ಪ್ರಯತ್ನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಾಡಲಿ ಎಂದರು.
ಮೂಲಸೌಲಭ್ಯ ಅಭಿವೃದ್ಧಿ, ವಾರ್ತಾ ಮತ್ತು ಹಜ್ ಸಚಿವ   ಆರ್. ರೋಷನ್ ಬೇಗ್,  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ   ಕಿಮ್ಮನೆ ರತ್ನಾಕರ್  ಹಾಗೂ ಇನ್ನಿತರ ಗಣ್ಯರು ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಎಲ್. ಹನುಮಂತಯ್ಯ  ಪ್ರಾಸ್ತಾವಿಕವಾಗಿ ಮಾತನಾಡಿದರು.
Please follow and like us:
error