ಕ್ರೀಡಾ ಶಾಲೆಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಂದೂಡಿಕೆ.

ಕೊಪ್ಪಳ,
ಜ.೦೨ (ಕ ವಾ) ಕೊಪ್ಪಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ
ಏರ್ಪಡಿಸಲಾಗಿದ್ದ ೨೦೧೬-೧೭ ನೇ ಸಾಲಿಗೆ ಕ್ರೀಡಾಶಾಲೆ ಹಾಗೂ ಕ್ರೀಡಾ ನಿಲಯಗಳಿಗೆ
ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕುಷ್ಟಗಿ ತಾಲೂಕಿನ ಕ್ರೀಡಾ ಪಟುಗಳ
ಆಯ್ಕೆ ಪ್ರಕ್ರಿಯೆಯನ್ನು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಲಾಗಿದೆ.
     ಕ್ರೀಡಾ
ಶಾಲೆಗೆ ಕುಷ್ಟಗಿ ತಾಲೂಕಿನ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಕುಷ್ಟಗಿ ತಾಲೂಕ
ಕ್ರೀಡಾಂಗಣ ಹಾಗೂ ಹನುಮಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ಜ.೦೨ ರಂದು
ಏರ್ಪಡಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದಾಗಿ ಆಯ್ಕೆ ಪ್ರಕ್ರಿಯೆಯನ್ನು  
ಮುಂದೂಡಿ, ಜ.೦೪ ರಂದು ನಿಗದಿಪಡಿಸಿದ ಸ್ಥಳದಲ್ಲಿಯೇ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದೆ
ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ||ಶಾರದಾ ನಿಂಬರಗಿ
ಅವರು ತಿಳಿಸಿದ್ದಾರೆ. 

ಜ.೦೪ ರಂದು ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಸಮಾರಂಭ.
ಕೊಪ್ಪಳ,
ಜ.೦೨ (ಕ ವಾ)  ಜಲಸಂಪನ್ಮೂಲ (ಸಣ್ಣ ನೀರಾವರಿ) ಇಲಾಖೆ ಮತ್ತು
ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಯ
ಯಲಬುರ್ಗಾ ತಾಲೂಕಿನಲ್ಲಿ ನೈಸರ್ಗಿಕ ನದಿ ಕೊಳ್ಳಗಳಿಗೆ ಅಡ್ಡಲಾಗಿ ಸರಣಿ ಪಿಕಪ್‌ಗಳ
ನಿರ್ಮಾಣ ಹಾಗೂ ಮಂಗಳೂರು ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣ
ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭವನ್ನು ಜ.೦೪ ರಂದು ಮಧ್ಯಾಹ್ನ ೦೨ ಗಂಟೆಗೆ ಮಂಗಳೂರು
ಗ್ರಾಮದಲ್ಲಿ ಏರ್ಪಡಿಸಲಾಗಿದೆ. 
     ಕನಕಗಿರಿ ಸುವರ್ಣಗಿರಿ ವಿರಕ್ತಮಠದ ಶ್ರೀ
ಡಾ||ಚೆನ್ನಮಲ್ಲ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು. ಜಿಲ್ಲಾ
ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಶಂಕುಸ್ಥಾಪನೆ
ನೆರವೇರಿಸುವರು. ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಸಮಾರಂಭದ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಲೋಕಸಭಾ ಸದಸ್ಯ ಸಂಗಣ್ಣ ಕರಡಿ, ಶಾಸಕರುಗಳಾದ
ಹಾಲಪ್ಪ ಆಚಾರ್, ಬಸವರಾಜ್ ಪಾಟೀಲ್ ಇಟಗಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ
ಎಂ.ಮೇಲಿನಮನಿ,  ಸದಸ್ಯರಾದ ಅಶೋಕ ತೋಟದ, ತಾಲೂಕಾ ಪಂಚಾಯತ್ ಅಧ್ಯಕ್ಷೆ ಮಹಾದೇವಿ ಕಂಬಳಿ,
ಉಪಾಧ್ಯಕ್ಷ ಶೇಖರಪ್ಪ ವಾರದ, ಸದಸ್ಯರಾದ ಸುಮಂಗಲಾ ಉಪ್ಪಾರ, ಗ್ರಾಮ ಪಂಚಾಯತ್ ಅಧ್ಯಕ್ಷೆ
ಶೋಭಾ ನಿಂಗಾಪೂರ, ಉಪಾಧ್ಯಕ್ಷೆ ಲಕ್ಷ್ಮವ್ವ ಅಳವಂಡಿ ಮುಖ್ಯ ಅತಿಥಿಗಳಾಗಿ
ಆಗಮಿಸಲಿದ್ದಾರೆ ಎಂದು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಕೊಪ್ಪಳ
ವಿಭಾಗದ ಕಾರ್ಯಪಾಲಕ ಅಭಿಯಂತರ ಹೆಚ್.ಲಷ್ಕರಿನಾಯ್ಕ ಅವರು
ತಿಳಿಸಿದ್ದಾರೆ.

 

Please follow and like us:
error