ಜಿಲ್ಲಾ ನೂತನ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಜು. ೨೧ ರಂದು ಕೊಪ್ಪಳಕ್ಕೆ

: ಕೊಪ್ಪಳ ಜಿಲ್ಲೆಯ ನೂತನ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಜು. ೨೧ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
  ಸಚಿವರು ಅಂದು ಬೆಳಿಗ್ಗೆ ೯ ಗಂಟೆಗೆ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ಕೊಪ್ಪಳಕ್ಕೆ ಆಗಮಿಸುವರು, ನಂತರ ಕೊಪ್ಪಳದ ಗವಿಮಠಕ್ಕೆ ಭೇಟಿ ನೀಟಿ ನೀಡುವರು.  ಮಧ್ಯಾಹ್ನ ೧೨ ಗಂಟೆಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಬರ ಪರಿಸ್ಥಿತಿ ಹಾಗೂ ಬರಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನಾ ಸಭೆ ನಡೆಸುವರು. ನಂತರ ಪುನರ್ವಸತಿ ಯೋಜನೆಗಳ ಕುರಿತಂತೆ ಪರಿಶೀಲನೆ ನಡೆಸುವರು.  ಮಧ್ಯಾಹ್ನ ೩ ಗಂಟೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಸಂಜೆ ೫ ಗಂಟೆಗೆ ಬಾಗಲಕೋಟೆ ಜಿಲ್ಲೆ ಬೀಳಗಿಗೆ ಪ್ರಯಾಣ ಬೆಳೆಸುವರು.

Leave a Reply