ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ.


ಕೊಪ್ಪಳ, ಜು.೨೦ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಪ್ಪಳ ಇವರಿಂದ ಪ್ರಸಕ್ತ ಸಾಲಿನ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸ್ವೀಕರಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ನಿಗಮವು ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿತ್ತು ಹಾಗೂ ಜೂ.೩೦ ಅರ್ಜಿ ಸ್ವೀಕರಿಸುವ ಕೊನೆ ದಿನಾಂಕವಾಗಿ ನಿಗದಿಪಡಿಸಲಾಗಿತ್ತು. ಆದರೆ ಈಗ ಅರ್ಜಿ ಸ್ವೀಕರಿಸುವ ದಿನಾಂಕವನ್ನು ಜೂ.೩೦ ರಿಂದ ಜು.೨೫ ರವರಗೆ ವಿಸ್ತರಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ವಿವಿಧ ಯೋಜನೆ ಅಲೆಮಾರಿ ಜನಾಂಗದವರಿಂದ ಅರ್ಜಿ ಆಹ್ವಾನ.

ಕೊಪ್ಪಳ, ಜು.೨೦  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಪ್ಪಳ ಇವರಿಂದ ಕರ್ನಾಟಕ ರಾಜ್ಯದ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ಮಂಡಳಿಯು ಒದಗಿಸಿದ ಅನುದಾನದಲ್ಲಿ ಜಿಲ್ಲೆಯ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಸೌಲಭ್ಯ ಒದಗಿಸಲು ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ನಿಗಮವು ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಂಡಿರುವ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆಗಳಿಗೆ ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳಾದ ಬೈರಾಗಿ(ಬಾವ), ಬಾಲ ಸಂತೋಷಿ-ಜೋಷಿ, ಬಾಜಿಗರ್, ಭರಡಿ, ಬುಡಬುಡಕಿ-ಜೋಶಿ-ಗೋಂಧಳಿ, ಚಾರ, ಚಿತ್ರಕತಿ-ಜೋಶಿ, ಧೋಲಿ, ದವೇರಿ, ದೊಂಬರಿ, ಘಿಸಾಡಿ, ಗರುಡಿ, ಗೋಪಾಲ್, ಗೋಂಧಳಿ, ಹೆಳವ, ಜೋಗಿ, ಕೆಲ್‌ಕರಿ, ಕೋಲ್‌ಹಾಟಿ, ನಂದಿವಾಲ-ಜೋಶಿ-ಘೋಂದಳಿ, ಫುಲ್-ಮಲ್ಲಿ, ನಾಥಪಂಥಿ-ಡೌರಿ-ಗೋಸಾವಿ, ನಿರ್‌ಶಿಕಾರಿ, ಪಂಗುಲ್, ಜೋಶಿ(ಸಾದಾ ಜೋಶಿ), ಸನ್‌ಸಿಯ, ಸರನಿಯ, ತಿರುಮಲಿ, ವ್ಶೆಡು, ವಾಸುದೇವ್, ವಡಿ, ವಗ್ರಿ, ವಿರ್, ಬಜನಿಯ, ಶಿಕ್ಕಲ್‌ಗಾರ, ಗೊಲ್ಲ, ಕಿಳ್ಳಕ್ಯಾತಸ್, ಸರೋಡಿ, ದುರ್ಗಾಮುರ್ಗಾ (ಬುರ್‌ಬುರ್‌ಚ್), ಹಾವಗಾರ್(ಹಾವಾಡಿಗರ್), ಪಿಚಲಗುಂಟಲ, ಮಸನಿಯ ಯೋಗಿ, ಬೆಸ್ತರ್, ಬುಂದ ಬೆಸ್ತ, ಕಟಬು, ಕಾಶಿಕಪ್‌ಡಿ, ದೊಂಬಿದಾಸ ಮತ್ತು ಬೈಲ್‌ಪತ್ತಾರ್ ಸಮುದಾಯಗಳಿಗೆ ಸೇರಿದವರು ಅರ್ಜಿ ಸಲ್ಲಿಸಬಹುದಾಗಿದೆ.ನಿಗದಿತ ಅರ್ಜಿ ನಮೂನೆಗಳನ್ನು  ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾಡಳಿತ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ದೂ. ಸಂಖ್ಯೆ: ೦೮೫೩೯-೨೨೧೮೪೭ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಜು.೩೦ ರೊಳಗಾಗಿ ಸಲ್ಲಿಸಬಹುದಾಗಿದೆ. ನಂತರ ಬಂದತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಪ್ರಸಕ್ತ ಸಾಲಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.  ಯೋಜನೆಗಳ ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್‌ಸೈಟ್ : ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ಗೆ ಭೇಟಿ ನೀಡಬಹುದಾಗಿದೆ ಎಂದು ತಿಳಿಸಿದೆ.

Please follow and like us:
error

Related posts

Leave a Comment