ಡಿ.೦೨ ರಿಂದ ಅಡುಗೆ ನೌಕರರ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಸೂಚನೆ

 ಅಕ್ಷರ ದಾಸೋಹ ಯೋಜನೆಯ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅಡುಗೆದಾರರು ಡಿ.೦೨ ರಿಂದ ರಾಜ್ಯ ವ್ಯಾಪ್ತಿ ಮುಷ್ಕರ ಆರಂಭಿಸುತ್ತಿರುವುದರಿಂದ.    ಶಾಲಾ ಮುಖ್ಯ ಶಿಕ್ಷಕರು ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ  ಅಕ್ಷರ ದಾಸೋಹ ಇಲಾಖೆಯ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಮುಖಾಂತರ ಶಾಲಾ ಮುಖ್ಯ ಶಿಕ್ಷಕರಿಗೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಲು ಸೂಚನೆ ನೀಡಲಾಗಿದ್ದು,  ಪಯಾಯ ವ್ಯವಸ್ಥೆ ಸಾಧ್ಯವಾಗದೇ ಇದ್ದರೆ   ಮಕ್ಕಳು ಮನೆಯಿಂದ ಮಧ್ಯಾಹ್ನ ಉಪಹಾರ ತರುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.  ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಎಲ್ಲಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ಒದಗಿಸಲಾಗಿದ್ದು, ಜಿಲ್ಲೆಯಲ್ಲಿ ಅಡುಗೆದಾರರ ಮುಷ್ಕರ ಕುರಿತು ರಾಜ್ಯ ಕಛೇರಿಗೂ ಸಹ ಮಾಹಿತಿ ನೀಡಲಾಗಿದೆ ಎಂದು ಅಕ್ಷರ ದಾಸೋಹ ವಿಭಾಗದ ಶಿಕ್ಷಣಾಧಿಕಾರಿಗಳು  ತಿಳಿಸಿದ್ದಾರೆ.
Please follow and like us:
error