ಹಿಂದುಳಿದ ವರ್ಗಗಳ ಸಮೀಕ್ಷೆ : ಟ್ರೈನರ್‌ಗಳಿಗೆ ತರಬೇತಿ

 ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಇಲಾಖೆಯಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ನೇಮಕ ಮಾಡಲಾದ ಮಾಸ್ಟರ್ ಟ್ರೈನರ‍್ಸ್‌ಗಳಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಡಿ.೦೧ ರಿಂದ ೨ ರವರೆಗೆ ಎರಡು ದಿನಗಳ ಕಾಲ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಆರ್.ಆರ್.ಜನ್ನು, ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಮತ್ತು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ತರಬೇತಿಯ ನೇತೃತ್ವ ವಹಿಸುವರು. ಸಮೀಕ್ಷಾ ಕಾರ್ಯದ ಮಾಸ್ಟರ್ ಟ್ರೈನರ‍್ಸ್‌ಗಳು, ಚಾರ್ಜ್ ಅಧಿಕಾರಿಗಳು, ಹೆಚ್ಚುವರಿ ಚಾರ್ಜ್ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಜಿಲ್ಲಾ ಬಿಸಿಎಂ ಅಧಿಕಾರಿ ಕಲ್ಲೇಶ ಅವರು ತಿಳಿಸಿದ್ದಾರೆ.

Leave a Reply