ಸಂವಿಧಾನದ ೩೭೧ನೇ ವಿಧಿ ತಿದ್ದುಪಡಿ ಹೋರಾಟಕ್ಕೆ ಸರ್ಕಾರಿ ನೌಕರರ ಸಂಘದ ಬೆಂಬಲ

 ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ ೩೭೧ನೇ ವಿಧಿ ತಿದ್ದುಪಡಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾ ಘಟಕದ ತನ್ನ ಬೆಂಬಲ ವ್ಯಕ್ತಪಡಿಸಿದೆ.
  ಹೈದ್ರಾಬಾದ್-ಕರ್ನಾಟಕ ಪ್ರದೇಶ ಹಿಂದುಳಿದ ಪ್ರದೇಶವಾಗಿದ್ದು, ಈ ಭಾಗಕ್ಕೆ ವಿಶೇಷ ಸ್ಥಾನಮಾನ ದೊರಕಿಸಿ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕಾಗಿದೆ.  ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಂವಿಧಾನದ ೩೭೧ನೇ ವಿಧಿಗೆ ತಿದ್ದುಪಡಿ ತರುವುದರ ಮೂಲಕ ಈ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕಾಗಿದೆ.  ಇದಕ್ಕಾಗಿ ಸದ್ಯ ನಡೆಯುತ್ತಿರುವ ಹೋರಾಟಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾ ಘಟಕ ಬೆಂಬಲ ನೀಡಲಿದೆ ಎಂದು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ, ಪ್ರಧಾನ ಕಾರ್ಯದರ್ಶಿ ನಾಗರಾಜ ಜುಮ್ಮನ್ನವರ್ ಅವರು ತಿಳಿಸಿದ್ದಾರೆ.
Please follow and like us:
error