You are here
Home > Koppal News > ಭಕ್ತಿ-ಭಾವದಿಂದ ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ.

ಭಕ್ತಿ-ಭಾವದಿಂದ ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ.

ಕೊಪ್ಪಳ ಅ. ೧೯ (ಕ ವಾ)
     ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
      ಅಕ್ಟೋಬರ್ ೨೭ ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತವು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುವುದು.   ವಾಲ್ಮೀಕಿ ಜಯಂತಿಯ ಅಂಗವಾಗಿ ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಸಿರಸಪ್ಪಯ್ಯನ ಮಠ ಆವರಣದಿಂದ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದೊಂದಿಗೆ ಅದ್ಧೂರಿ ಮೆರವಣಿಗೆ ಏರ್ಪಡಿಸಲಾಗುವುದು.  ವಾಲ್ಮೀಕಿಯವರ ಭಾವಚಿತ್ರದ ಮೆರವಣಿಗೆಗೆ ಈ ಬಾರಿ ವೈಭವದ ಸಾರೋಟ್ ಬಳಸಲು ನಿರ್ಧರಿಸಲಾಗಿದೆ.  ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು, ಸ್ತಬ್ಧ ಚಿತ್ರಗಳು ಪಾಲ್ಗೊಂಡು ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ.  ಮೆರವಣಿಗೆಯಲ್ಲಿ ಎಲ್ಲಾ ಸಂಘಟನೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು, ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಬೇಕು.  ಮೆರವಣಿಗೆಯ ನಂತರ ಸಾಹಿತ್ಯ ಭವನದಲ್ಲಿ ಸಮಾರಂಭ ಏರ್ಪಡಿಸಲಾಗಿದ್ದು, ಸಮಾರಂಭದಲ್ಲಿ ಗಣ್ಯಾತಿಗಣ್ಯರೆಲ್ಲರು ಭಾಗವಹಿಸಲಿದ್ದಾರೆ.  ಮಹರ್ಷಿ ವಾಲ್ಮೀಕಿಯವರ ಕುರಿತು ಹಾಗೂ ಜಯಂತಿ ಕಾರ್ಯಕ್ರಮದ ಮಹತ್ವ ಕುರಿತಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಗಣನೀಯ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಗುವುದು.  ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗುವುದು.   ಸಾರ್ವಜನಿಕರು, ಸಂಘಟನೆಗಳ ಪದಾಧಿಕಾರಿಗಳು ವಾಲ್ಮೀಕಿ ಜಯಂತಿಯನ್ನು ಹಬ್ಬದ ವಾತಾವರಣದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಸಹಕರಿಸಬೇಕು ಎಂದು   ಪ್ರಭಾರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ಮನವಿ ಮಾಡಿದರು.  ವಾಲ್ಮೀಕಿ ಜಯಂತಿ ದಿನದಂದು ಹಾಗೂ ಮುನ್ನಾ ದಿನದಂದು, ನಗರದ ಜವಾಹರ ರಸ್ತೆ ಹಾಗೂ ನಗರದ ಪ್ರಮುಖ ರಸ್ತೆಯನ್ನು ಸ್ವಚ್ಛಗೊಳಿಸಲು ಅಲ್ಲದೆ ಮೆರವಣಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಲು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
       ಸಭೆಯಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ, ಡಿವೈಎಸ್‌ಪಿ ರಾಜೀವ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ್, ನಗರಸಭೆ ಪೌರಾಯುಕ್ತ ರಮೇಶ್ ಪಟ್ಟೆದಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರಾದ ಮಂಜುನಾಥ ಗೊಂಡಬಾಳ,  ರತ್ನಾಕರ್ ಟಿ., ದೇವೇಂದ್ರಪ್ಪ ಡೊಳ್ಳಿನ, ಶರಣಪ್ಪ ನಾಯಕ್, ರಾಮಣ್ಣ ಕಲ್ಲನ್ನವರ್, ನಾಗರಾಜ ಬಿಲ್ಗಾರ್ ಸೇರಿದಂತೆ, ಗಣ್ಯರಾದ ಇಂದಿರಾ ಬಾವಿಕಟ್ಟಿ, ಶಿವಾನಂದ ಹೊದ್ಲೂರ್ ಮತ್ತಿತರ ಗಣ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಆದಿಕವಿ ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಅ. ೨೭ ರಂದು ಜಿಲ್ಲಾ ಕೇಂದ್ರದಲ್ಲಿ ಎಲ್ಲ ಸಮುದಾಯದ ಸಹಭಾಗಿತ್ವದಲ್ಲಿ ಭಕ್ತಿ ಭಾವದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ. ಪ್ರವೀಣ್‌ಕುಮಾರ್ ಜಿ.ಎಲ್. ಅವರು ಹೇಳಿದರು.

Leave a Reply

Top