ವಿಧಾನಪರಿಷತ್ ಚುನಾವಣೆ : ಮತದಾನಕ್ಕೆ ಪರ್ಯಾಯ ದಾಖಲೆಗಳು

  ಕರ್ನಾಟಕ ವಿಧಾನಪರಿಷತ್ತಿಗೆ ಈಶಾನ್ಯ ಪದವೀಧರರ ಮತಕ್ಷೇತ್ರದಿಂದ ಜೂ. ೧೦ ರಂದು ನಡೆಯುವ ಮತದಾನ ದಿನದಂದು ಮತದಾರರು ಕಡ್ಡಾಯವಾಗಿ ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕು.  ಇಂತಹ ಗುರುತಿನ ಚೀಟಿ ತರಲು ವಿಫಲರಾಗುವಂತಹ ಮತದಾರರು ಮತದಾನ ಮಾಡಲು ಪರ್ಯಾಯವಾಗಿ ೧೯ ದಾಖಲಾತಿಗಳ ಪೈಕಿ ಯಾವುದಾದರೊಂದು ದಾಖಲೆ ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ.
  ಪರ್ಯಾಯ ೧೯ ದಾಖಲೆಗಳ ವಿವರ ಇಂತಿದೆ.  ಪಾಸಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ರಾಜ್ಯ/ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ಅವರ ಕೆಲಸಗಾರರಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, ಸಾರ್ವಜನಿ ವಲಯದ ಬ್ಯಾಂಕ್/ ಕಿಸಾನ್ ಮತ್ತು ಅಂಚೆ ಕಚೇರಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತ, ಭಾವಚಿತ್ರವಿರುವ ನೊಂದಾಯಿತ ಡೀಡ್‌ಗಳು/ ಪಟ್ಟಾಗಳು ಮುಂತಾದ ಆಸ್ತಿ ದಾಖಲೆ, ಸಕ್ಷಮ ಪ್ರಾಧಿಕಾರ ನೀಡಿರುವ ಎಸ್‌ಸಿ/ಎಸ್‌ಟಿ/ಓಬಿಸಿ ಭಾವಚಿತ್ರವಿರುವ ಪ್ರಮಾಣಪತ್ರ, ಭಾವಚಿತ್ರವಿರುವ ಪಿಂಚಣಿ ಪಾವತಿ ಆದೇಶ ಅಥವಾ ಮಾಜಿ ಯೋಧರ ಪಿಂಚಣಿ ಪುಸ್ತ,/ ಪಿಂಚಣಿ ಸಂದಾಯ ಆದೇಶಗಳಂತಹ ಪಿಂಚಣಿ ದಾಖಲೆಗಳು, ವೃದ್ಧಾಪ್ಯ ವೇತನ ಆದೇಶ, ವಿಧವಾ ವೇತನ ಆದೇಶ, ಭಾವಚಿತ್ರವಿರುವ ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿ, ಭಾವಚಿತ್ರವಿರುವ ಶಸ್ತ್ರ ಪರವಾನಿಗೆ, ಅಂಗವಿಕಲಿಗೆ ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿ, ಆರೋಗ್ಯ ವಿಮೆ ಯೋಜನೆಯಡಿ ನೀಡಲಾದ ಭಾವಚಿತ್ರವಿರುವ ಸ್ಮಾರ್ಟ್ ಕಾರ್ಡ್, ಭಾವಚಿತ್ರವಿರುವ ಪಡಿತರ ಚೀಟಿ, ಮಾಜಿ ಸೈನಿಕರಿಗೆ ನೀಡಿದ ಸಿಎಸ್‌ಡಿ ಕ್ಯಾಂಟೀನ್ ಕಾರ್ಡ್ ಭಾವಚಿತ್ರ ಸಹಿತ, ಸಂಧ್ಯಾ ಸುರಕ್ಷಾ ಯೋಜನೆ ಭಾವಚಿತ್ರವಿರುವ ಗುರುತಿನ ಚೀಟಿ, ನಗರಸಭೆ/ಪುರಸಭೆ/ಗ್ರಾ.ಪಂ. ಗಳು ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, ಸರ್ಕಾರಿ ಇಲಾಖೆ ನೀಡಿರುವ ಹಿರಿಯ ನಾಗರೀಕರ ಗುರುತಿನ ಚೀಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಿರುವ ಕುಟುಂಬದ ಸದಸ್ಯರ ಹೆಸರು, ವಯಸ್ಸು ಹಾಗೂ ಕುಟುಂಬದ ಯಜಮಾನರೊಂದಿಗೆ ಹೊಂದಿರುವ ಸದಸ್ಯರ ಸಂಬಂಧ ಒಳಗೊಂಡ ಭಾವಚಿತ್ರವಿರುವ ಮೂಲ ಪಡಿತರ ಚೀಟಿ, ಮಾನ್ಯತೆ ಪಡೆದ ನೋಂದಾಯಿತ ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೊಟ್ಟಿರುವ ಗುರುತಿನ ಚೀಟಿ.  ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ಇಲ್ಲದವರು, ಈ ದಾಖಲೆಗಳ ಪೈಕಿ ಯಾವುದಾದರೊಂದು ದಾಖಲೆಯನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.

Related posts

Leave a Comment