ಮೊಹರಂ ಹಬ್ಬ : ಮದ್ಯಪಾನ ನಿಷೇಧಾಜ್ಞೆ ಜಾರಿ

 ಜಿಲ್ಲೆಯಲ್ಲಿ ಮೊಹರಂ ಹಬ್ಬದ ಆಚರಣೆ ನಿಮಿತ್ಯವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶಿಸಿದ್ದಾರೆ.
     ಮೊಹರಂ ಹಬ್ಬದ ಪ್ರಯುಕ್ತ ನ. ೨೪ ರ ರಾತ್ರಿ ೦೮ ಗಂಟೆಯಿಂದ ನ. ೨೬ ರಂದು ಬೆಳಿಗ್ಗೆ ೦೮ ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯಪಾನ ನಿಷೇಧಾಜ್ಞೆ ಜಾರಿಗೊಳಿಸಿದೆ.  ಇದರನ್ವಯ ನಿಷೇಧಿತ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ವೈನ್‌ಶಾಪ್, ಬಾರಗಳು ಹಾಗೂ ಚಿಲ್ಲರೆ ಮದ್ಯದ ಅಂಗಡಿಗಳಲ್ಲಿ ಚಿಲ್ಲರೆ ಮತ್ತು ಸಗಟು ಮದ್ಯ ಮಾರಾಟ ನಿಷೇಧಿಸಲಾಗಿದೆ.  ಅಲ್ಲದೆ ಈ ಅವಧಿಯಲ್ಲಿ ಎಲ್ಲ ಮದ್ಯದ ಅಂಗಡಿಗಳನ್ನು ಮುಚ್ಚಲು ಆದೇಶಿಸಿದೆ ಎಂದು ನಿಷೇಧಾಜ್ಞೆಯಲ್ಲಿ ತಿಳಿಸಿದೆ.
Please follow and like us:
error