ಹುಲಿಗೆಮ್ಮ ದೇವಿ ಜಾತ್ರೆ : ಮೇ. ೦೭ ರಂದು ಪೂರ್ವಭಾವಿ ಸಭೆ

 ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಪ್ಪಳ ಜಿಲ್ಲೆ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಸಿದ್ಧತೆಗಳನ್ನು ಕೈಗೊಳ್ಳುವ ಕುರಿತು ಪೂರ್ವಭಾವಿ ಸಭೆ ಮೇ. ೦೭ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.

    ಹುಲಿಗೆಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮೇ. ೨೧ ರಿಂದ ೨೫ ರವರೆಗೆ ವಿಜೃಂಭಣೆಯಿಂದ ನಡೆಸುವ ಸಂಬಂಧ ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆ ನಡೆಯಲಿದ್ದು, ಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ವಹಿಸುವರು.  ಸಭೆಯಲ್ಲಿ ಜಾತ್ರಾ ಸಂದರ್ಭದಲ್ಲಿ ಕುಡಿಯುವ ನೀರು ಸೌಕರ್ಯ, ಪಾರ್ಕಿಂಗ್ ವ್ಯವಸ್ಥೆ, ಹೆಚ್ಚುವರಿ ಬಸ್, ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ, ಕ್ಷೇತ್ರದ ಸ್ವಚ್ಛತೆ ಮುಂತಾದ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಚಂದ್ರಮೌಳಿ   ತಿಳಿಸಿದ್ದಾರೆ.
Please follow and like us:
error