You are here
Home > Koppal News > ಜು.೧೦ ರಂದು ಕೊಪ್ಪಳದಲ್ಲಿ ‘ಅನ್ನಭಾಗ್ಯ’ ಯೋಜನೆ ಉದ್ಘಾಟನೆ

ಜು.೧೦ ರಂದು ಕೊಪ್ಪಳದಲ್ಲಿ ‘ಅನ್ನಭಾಗ್ಯ’ ಯೋಜನೆ ಉದ್ಘಾಟನೆ

  ಬಿಪಿಎಲ್ ಕುಟುಂಬಕ್ಕೆ ಪ್ರತಿ ಕೆ.ಜಿ.ಗೆ ರೂ.೧ ದರದಲ್ಲಿ ೩೦ ಕೆ.ಜಿ. ಆಹಾರಧಾನ್ಯ ವಿತರಣೆ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆಯ ‘ಅನ್ನಭಾಗ್ಯ’ ಯೋಜನೆಯ ಉದ್ಘಾಟನಾ ಸಮಾರಂಭ ಜು.೧೦ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ.
 ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ನೆರವೇರಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಶಿವರಾಮೇಗೌಡ, ಜಿ.ಪಂ.ಅಧ್ಯಕ್ಷ ಟಿ.ಜನಾರ್ಧನ ಹುಲಗಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ತಾ.ಪಂ. ಅಧ್ಯಕ್ಷ ದೇವಣ್ಣ ಭರಮಪ್ಪ ಮೇಕಾಳಿ, ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ.ಮಹೇಶ ಮುಂತಾದವರು ಭಾಗವಹಿಸುವರು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಅಶೋಕ್ ಕಲಘಟಗಿ   ತಿಳಿಸಿದ್ದಾರೆ. 

Leave a Reply

Top