ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು – ಕವಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ

ವಿದ್ಯಾರ್ಥಿಗಳು ಬರೀ ಪಠ್ಯಕ್ಕೆ ಸೀಮಿತಗೊಳ್ಳದೆ ಪಠ್ಯೇತರ ಚಟುವಟಿಕೆಗಳಾದ ಸಾಹಿತ್ಯ, ಸಂಗೀತ, ನೃತ್ಯ ಮತ್ತು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಖ್ಯಾತ ಸಾಹಿತಿ ಡಾ. ಮೂಡ್ನಕೂಡು ಚಿನ್ನಸ್ವಾಮಿ ಅವರು ತಿಳಿಸಿದರು.

ನಗರದ ಬಳ್ಳಾರಿ ಶಿಕ್ಷಣ ಸೇವಾ ಸಂಸ್ಥೆಯ ಸ್ವತಂತ್ರ ಪದವಿಪೂರ್ವ ಕಾಲೇಜ್ ಶುಕ್ರವಾರ ಸಂಜೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ, ಕನಕದಾಸ ಜಯಂತಿ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗುರು ಹಿರಿಯರನ್ನು ಗೌರವಿಸುವುದು, ಎಲ್ಲರನ್ನೂ ಸಮಾನತೆಯಿಂದ ಕಾಣುವುದು, ಕಠಿಣ ಪರಿಶ್ರಮ, ಶ್ರದ್ಧೆಯಿಂದ ಅಭ್ಯಸಿಸಿದರೆ ಭವಿಷ್ಯದಲ್ಲಿ ಅತ್ಯುತ್ತಮ ಜೀವನ ಸಾಗಿಸಬಹುದಾಗಿದೆ ಎಂದು ಹೇಳಿದರು.
ಕನ್ನಡ ನಾಡು ಕಂಡ ಆದರ್ಶ ವ್ಯಕ್ತಿತ್ವ ಕನಕದಾಸರದು. ಜಾತಿ ಪದ್ಧತಿ, ಅಸಮಾನತೆ ವಿರುದ್ಧ  ಭಕ್ತಿ ಮೂಲಕ ಸಿಡಿದಿದ್ದವರು. ಭಕಿಯ ಮೂಲಕವೇ ಸಮಾನತೆ ಸಾರಿದರು ಎಂದು ಹೇಳಿದರು.
ಸಮಾಜ ಸಂಸ್ಕೃತಿಯಿಂದ ವಿಕೃತಿ ಕಡೆಗೆ ಹೋಗುತ್ತಿರುವುದು ಆತಂಕಕಾರಿ. ವಿದ್ಯಾರ್ಥಿಗಳು ಮಾಢ್ಯ, ಕಂದಾಚಾರಗಳ ವಿರುದ್ಧ ಹೋರಾಟ ನಡೆಸಬೇಕು. ಈ ಮೂಲಕ ಜೀವನದಲ್ಲಿ ವೈಜ್ಞಾನಿಕ, ವೈಚಾರಿಕತೆಯನ್ನು ಅಳವಡಿಸಿಕೊಂಡು ಸಂವಿಧಾನದ ಆಶಯ ಎತ್ತಿ ಹಿಡಿಯಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಗುಲ್ಬರ್ಗಾ ವಿಶ್ವವಿದ್ಯಾಲಯದ ಮಾಜಿ ಸೆನೆಟ್ ಸದಸ್ಯ, ಪತ್ರಕರ್ತ ಸಿ. ಮಂಜುನಾಥ್, ಉಪ ಪ್ರಾಚಾರ್ಯ ವರ್ಗೀಸ್ ಮಾತನಾಡಿದರು. ಮತ್ತೋರ್ವ ಉಪ ಪ್ರಾಚಾರ್ಯ ಜಿ ಶ್ರೀನಿವಾಸ ರೆಡ್ಡಿ ಅತಿಥಿಗಳನ್ನು ಪರಿಚಯಿಸಿದರು. 
ಅಧ್ಯಕ್ಷತೆಯನ್ನು ಬಳ್ಳಾರಿ ಶಿಕ್ಷಣ ಸೇವಾ ಸಂಸ್ಥೆಯ ಪೋಷಕ ಎಂ ಸಂಜೀವಪ್ಪ ಅವರು ವಹಿಸಿದ್ದರು.
ಸಂಸ್ಥೆಯ ಉಪಾಧ್ಯಕ್ಷ ಕೆ ತಿಲಕಕುಮಾರ್, ಪ್ರಾಚಾರ್ಯ ಕೆ ವೆಂಕಟೇಶ್ವರ ರಾವ್, ಮುಖ್ಯ ಗುರುಗಳಾದ ವಿಜಯಲಕ್ಷ್ಮಿ, ಶೈಲಜಾ ಮತ್ತಿತರರು ಉಪಸ್ಥಿತರಿದ್ದರು. 
ಸನ್ಮಾನ: ಇದೇ ಸಂದರ್ಭದಲ್ಲಿ ೨೦೧೪ ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಹಾಗೂ ಸಿ ಮಂಜುನಾಥ್ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಪ್ರಶಸ್ತಿ ವಿತರಣೆ: ಮಕ್ಕಳ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಅತಿಥಿಗಳು ಪ್ರಶಸ್ತಿ ವಿತರಿಸಿದರು.
ಗಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮಗಳು: ವಿದ್ಯಾರ್ಥಿ-ವಿದ್ಯಾರ್ಥಿನಿಯರು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದ ಸಭಿಕರನ್ನು ಆಕರ್ಷಿಸಿದವು.
ಉಪನ್ಯಾಸಕ ನಂದನಗೌಡ ಪೊಲೀಸ್ ಪಾಟೀಲ್ ಸ್ವಾಗತಿಸಿದರು. ಉಪನ್ಯಾಸಕ ಮಲ್ಲಿಕಾರ್ಜುನ ಮಠಪತಿ ನಿರೂಪಿಸಿದರು. ಉಪನ್ಯಾಸಕಿ ಡಾ. ಗಾಯತ್ರಿ ಸೂಗೂರ್ ವಂದಿಸಿದರು. 

Related posts

Leave a Comment