ರಾಷ್ಟ್ರೀಯ ಪಲ್ಸ್ ಪೋಲಿಯೋ ಜ. ೦೭ ರಂದು ಪೂರ್ವಭಾವಿ ಸಭೆ.

ಕೊಪ್ಪಳ, ಜ.೦೫ (ಕವಾ) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜ.೧೭ ರಿಂದ ಜ.೨೦ ರವರೆಗೆ ನಾಲ್ಕು ದಿನಗಳ ಕಾಲ ಜಿಲ್ಲಾದ್ಯಂತ ನಡೆಯಲಿರುವ ಮೊದಲನೆ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಸಿದ್ಧತೆಗಾಗಿ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯನ್ನು ಜ.೦೭ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
     ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಗೆ   ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ತಪ್ಪದೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀಕಾಂತ ಬಾಸೂರು ಅವರು ತಿಳಿಸಿದ್ದಾರೆ. 
Please follow and like us:
error