ಪ್ರಾದೇಶಿಕ ಆಯುಕ್ತರಿಂದ ನ. ೨೯ ರಂದು ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಗತಿ ಪರಿಶೀಲನೆ

 ಗುಲಬರ್ಗಾ ವಿಭಾಗಕ್ಕೆ ಬರುವ ಜಿಲ್ಲೆಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಪರಿಶೀಲಿಸಲು ರಾಜ್ಯ ಚುನಾವಣಾ ಆಯೋಗವು ಪ್ರಾದೇಶಿಕ ಆಯುಕ್ತರನ್ನು ಖoಟಟ ಔbseಡಿveಡಿ ರನ್ನಾಗಿ ನೇಮಿಸಿದ್ದು, ಗುಲಬರ್ಗಾದ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್ ಅವರು ಡಿ. ೨೦ ರಿಂದ ವಿವಿಧ ಜಿಲ್ಲೆಗಳ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸುವರು.
  ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಎರಡನೆ ಹಂತದ ಪ್ರಗತಿ ಪರಿಶೀಲನೆ ಡಿ. ೨೦ ರಂದು   ಮಧ್ಯಾಹ್ನ ೧೨ ಗಂಟೆಗೆ ಕೊಪ್ಪಳ ತಹಸಿಲ್ದಾರರ ಕಚೇರಿಯಲ್ಲಿ ನಡೆಯಲಿದೆ.  ಈ ಸಭೆಯಲ್ಲಿ ಸಂಬಂಧಿಸಿದ ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಜಿಲ್ಲಾ ಘಟಕದ ಅಧ್ಯಕ್ಷರು ಭಾಗವಹಿಸುವಂತೆ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ತಿಳಿಸಿದ್ದಾರೆ.

Leave a Reply