‘ಜನ-ಮನ’ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ ಸಿದ್ಧತೆ ಕೈಗೊಳ್ಳಲು ಆರ್.ಆರ್. ಜನ್ನು ಸೂಚನೆ.

ಕೊಪ್ಪಳ ಜು. ೨೯ಸರ್ಕಾರ ಜಾರಿಗೊಳಿಸಿರುವ ಹಲವು ಜನಪರ ಯೋಜನೆಗಳ ಬಗ್ಗೆ ಫಲಾನುಭವಿಗಳ ಅನಿಸಿಕೆ ಅಭಿಪ್ರಾಯ ಸಂಗ್ರಹ ಮಾಡುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಫಲಾನುಭವಿಗಳೊಂದಿಗೆ ನಡೆಸುವ ‘ಜನ-ಮನ’ ಸಂವಾದ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
     ‘ಜನ-ಮನ’ ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಂವಾದ ನಡೆಸುವ ಕಾರ್ಯಕ್ರಮದ ಸಿದ್ಧತೆಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರಾಜ್ಯದ ಮುಖ್ಯಮಂತ್ರಿಗಳ ಆಶಯದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ‘ಜನ-ಮನ’ ಸಂವಾದ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.  ಕಾರ್ಯಕ್ರಮದ ದಿನಾಂಕವನ್ನು ಸಚಿವರೊಂದಿಗೆ ಸಮಾಲೋಚಿಸಿ ಶೀಘ್ರ ನಿಗದಿಪಡಿಸಲಾಗುವುದು.  ಪ್ರಸ್ತುತ ಸರ್ಕಾರ ಹಲವಾರು  ಅನ್ನಭಾಗ್ಯ, ಕ್ಷೀರಭಾಗ್ಯ, ಋಣಮುಕ್ತ, ಶಾದಿ ಭಾಗ್ಯ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ, ಮನಸ್ವಿನಿ, ಮೈತ್ರಿ, ವಸತಿ ಭಾಗ್ಯ, ಕೃಷಿ ಭಾಗ್ಯ ಹೀಗೆ ಅನೇಕ ಜನಪರ ಯೋಜನೆಗಳು ಜಾರಿಗೊಂಡಿವೆ.  ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಫಲಾನುಭವಿಗಳಿಂದಲೇ ನೇರವಾಗಿ ಕೇಳಿ ತಿಳಿದುಕೊಳ್ಳುವ ಸಲುವಾಗಿ ಜನ-ಮನ ಸಂವಾದ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ.  ಸಂವಾದ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕೊಪ್ಪಳಕ್ಕೆ ಕರೆತರುವ ಜವಾಬ್ದಾರಿ ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ವಹಿಸಲಾಗಿದೆ.  ಅನ್ನಭಾಗ್ಯ- ಆಹಾರ ಮತ್ತು ನಾಗ
     ಸಭೆಯಲ್ಲಿ ಉಪಸ್ಥಿತರಿದ್ದ ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಮಾತನಾಡಿ, ಸಂವಾದ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಮಹಿಳೆಯರಿಗೂ ಹೆಚ್ಚಿನ ಆದ್ಯತೆ ನೀಡಬೇಕು.  ಫಲಾನುಭವಿಗಳನ್ನು ಸಂವಾದ ಕಾರ್ಯಕ್ರಮಕ್ಕೆ ಕರೆ ತರುವ ವ್ಯವಸ್ಥೆಯನ್ನು ಅಧಿಕಾರಿಗಳು ಸಮರ್ಪಕವಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು.
     ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು, ಜನ-ಮನ ಸಂವಾದ ಕಾರ್ಯಕ್ರಮದ ಕುರಿತು ಸಭೆಗೆ ವಿವರಣೆ ನೀಡಿದರು.  ಸಭೆಯಲ್ಲಿ ಡಿವೈಎಸ್‌ಪಿ ರಾಜೀವ್, ಆಹಾರ ಇಲಾಖೆ ಉಪನಿರ್ದೇಶಕ ವೈ.ಹೆಚ್. ಲಂಬೂ, ಜಂಟಿಕೃಷಿ ನಿರ್ದೇಶಕ ರಾಮದಾಸ್, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಭಾಸ್ಕರನಾಯಕ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ್ ಕೋಟಿಮನಿ ಸೇರಿದಂತೆ ಎಲ್ಲಾ ಅಭಿವೃದ್ಧಿ ನಿಗಮಗಳ ಅಧಿಕಾರಿಗಳು, ತಾಲೂಕುಗಳ ತಹಸಿಲ್ದಾರರು, ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

ರಿಕ ಸರಬರಾಜು ಇಲಾಖೆ, ಕ್ಷೀರಭಾಗ್ಯ- ಸಾರ್ವಜನಿಕ ಶಿಕ್ಷಣ ಇಲಾಖೆ, ಋಣಮುಕ್ತ (ಸಾಲಮನ್ನಾ)- ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮ, ಡಾ. ಅಂಬೇಡ್ಕರ್ ಪ.ಜಾತಿ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಪ.ವರ್ಗಗಳ ಅಭಿವೃದ್ಧಿ ನಿಗಮ, ಮನಸ್ವಿನಿ-ಮೈತ್ರಿ- ಕಂದಾಯ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ- ಪಶುಸಂಗೋಪನೆ, ಕೃಷಿಭಾಗ್ಯ- ಕೃಷಿ ಇಲಾಖೆ, ವಸತಿ ಭಾಗ್ಯ- ಜಿಲ್ಲಾ ಪಂಚಾಯತಿ ಇಲಾಖೆಗಳು ಸಂಬಂಧಪಟ್ಟ ಫಲಾನುಭವಿಗಳನ್ನು ಕೊಪ್ಪಳಕ್ಕೆ ಕರೆತರುವ ವ್ಯವಸ್ಥೆ ಮಾಡಬೇಕು.  ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮುತುವರ್ಜಿ ವಹಿಸಿ, ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಬೇಕು.  ಆಯಾ ಇಲಾಖಾ ಅಧಿಕಾರಿಗಳಿಗೆ ವಹಿಸಿಕೊಡುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Please follow and like us:
error