ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ : ಬಹಿರಂಗ ಪ್ರಚಾರ ಮುಕ್ತಾಯ

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಬಹಿರಂಗ ಪ್ರಚಾರ ಮುಕ್ತಾಯಗೊಂಡಿದ್ದು, ಯಾವುದೇ ರಾಜಕೀಯ ಪಕ್ಷದವರು/ಅಭ್ಯರ್ಥಿಗಳು ಬಹಿರಂಗ ಪ್ರಚಾರ ಕೈಗೊಳ್ಳಲು ಅವಕಾಶವಿರುವುದಿಲ್ಲ. ಬಹಿರಂಗ ಪ್ರಚಾರ ಕೈಗೊಂಡಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣಾಧಿಕಾರಿಗಳಾಗಿರುವ ಗುಲಬರ್ಗಾ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ. 
  ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಜೂ.೨೦ ರಂದು ಬೆಳಿಗ್ಗೆ ೮.೦೦ ಗಂಟೆಯಿಂದ ೪.೦೦ ಗಂಟೆಯವರೆಗೆ ನಡೆಯಲಿದ್ದು, ಚುನಾವಣಾ ಪ್ರಚಾರವು ಚುನಾವಣೆ ಆಯೋಗದ ಮಾರ್ಗಸೂಚಿಯಂತೆ ಚುನಾವಣೆ ನಡೆಯಲಿರುವ ದಿನಾಂಕದಿಂದ ೪೮ ಗಂಟೆಯೊಳಗೆ ಅಂದರೆ ದಿನಾಂಕ: ೧೮-೦೬-೨೦೧೪ ರ ಸಾಯಂಕಾಲ ೪.೦೦ ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

Leave a Reply