ಎಸ್. ಬಂಗಾರಪ್ಪ ನಿಧನ : ಗಣ್ಯರ ಶೋಕ

ಕೊಪ್ಪಳ ಡಿ  ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಸವದಿ, ಸಂಸದ ಶಿವರಾಮಗೌಡ, ಶಾಸಕ ಸಂಗಣ್ಣ ಕರಡಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
  ಎಸ್. ಬಂಗಾರಪ್ಪ ಅವರು ಕಿರಿಯ ರಾಜಕಾರಣಿಗಳಿಗೆ ಸ್ಪೂರ್ತಿಯ ಸೆಲೆಯಾಗಿದ್ದರು, ದೀನ ದಲಿತರು, ಬಡವರ ಬಗ್ಗೆ ಅತ್ಯಂತ ಕಾಳಜಿ ಹೊಂದಿದ್ದ ಅವರು ಹಿಂದುಳಿದ ವರ್ಗಗಳ ನಾಯಕರಾಗಿದ್ದರು, ಬಂಗಾರಪ್ಪ ಅವರ ನಿಧನದಿಂದ ಈ ರಾಜ್ಯ ಹಿರಿಯ ರಾಜಕೀಯ ಮುತ್ಸದ್ಧಿಯನ್ನು ಕಳೆದುಕೊಂಡಂತಾಗಿದೆ.  ಅವರ ಆತ್ಮಕ್ಕೆ ಭಗವಂತ ಚಿರ ಶಾಂತಿಯನ್ನು ದಯಪಾಲಿಸಲಿ ಎಂದು ಗಣ್ಯರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Please follow and like us:
error