ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ – ಹನುಮಂತಪ್ಪ ಅಂಡಗಿ.

ಕೊಪ್ಪಳ : ಮುಂಬರುವ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ಖಚಿತ ಎಂದು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ. 
ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ರಾಜ್ಯ ಮಟ್ಟದ ೧೪ ನೇ ಹಾಗೂ ೧೭ ನೇ ಚುಟುಕು ಸಾಹಿತ್ಯ ಸಮ್ಮೇಳನ ಹಾಗೂ ಕೊಪ್ಪಳ ಜಿಲ್ಲಾ ಮೂರು ಚುಟುಕು ಸಾಹಿತ್ಯ ಸಮ್ಮೇಳನಗಳನ್ನು ಹಮ್ಮಿಕೊಂಡು ಚುಟುಕುಸಿರಿ, ಚುಟುಕು ಚಿಲುಮೆ, ಚುಟುಕು ತರಂಗ, ಗವಿಸಿರಿ, ಗವಿ ಬೆಳಕು, ಶರಣ ಪಥಿಕ, ಗ್ರಂಥಗಳನ್ನು ಹೊರ ತಂದು ಸಾಹಿತ್ಯ ಸೇವೆಯಲ್ಲಿ ತೊಡಗಿಕೊಳ್ಳಲಾಗಿದ್ದು. ಈಗ ಮುಂಬರುವ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. 
Please follow and like us:
error