ಡಾ|| ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶಗಳು ಬದುಕಿಗೆ ದಾರಿದೀಪ : ಕೆ.ರಾಘವೇಂದ್ರ ಹಿಟ್ನಾಳ

ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ ಅವರು ಜನಮಾನಸದಲ್ಲಿ ಅಜರಾಮರರಾಗಿ ಉಳಿದಂತಹ ವ್ಯಕ್ತಿಯಾಗಿದ್ದು, ವಿದ್ಯಾರ್ಥಿಗಳು ಅವರ ಜೀವನ ಚರಿತ್ರೆಯ ಬಗ್ಗೆ ಅಧ್ಯಯನ ಮಾಡಿ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕೆಂದು ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಹೇಳಿದರು.    ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಭಾರತ ರತ್ನ ಡಾ|| ಬಿ.ಆರ್.ಅಂಬೇಡ್ಕರ್‍ರ 58ನೇ ಮಹಾಪರಿನಿರ್ವಾಣ ಪುಣ್ಯಸ್ಮರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.         ಅಂಬೇಡ್ಕರ್ ಅವರು ಇಡೀ ದೇಶದಲ್ಲಿ ಮನುಕುಲವನ್ನು, ಎಲ್ಲಾ ಸಮಾಜವನ್ನು ಒಂದೇ ರೀತಿ ಕಾಣುವ ರೀತಿಯಲ್ಲಿ ಕೆಲಸ ಮಾಡಿದ್ದರು.  ಸಾಮಾಜಿಕ ನ್ಯಾಯಕ್ಕಾಗಿ ದುಡಿದ ಅವರು, ಎಲ್ಲ ವರ್ಗದ ಜನರಿಗೆ ದಾರಿ ದೀಪವಾಗಿದ್ದರು.  ಇಡೀ ಜಗತ್ತು ಶ್ಲಾಘಿಸುವ ಭಾರತದ ಸಂವಿಧಾನವನ್ನು ಪರಿಚಯಿಸಿದ ಕೀರ್ತಿ ಅಂಬೇಡ್ಕರ ಅವರಿಗೆ ಸಲ್ಲುತ್ತದೆ.  ಅಂಬೇಡ್ಕರ್ ಅವರು ಶ್ರೇಷ್ಠ ನ್ಯಾಯವಾದಿಗಳಾಗಿ, ಭಾರತದಲ್ಲಿ ಶೋಷಿತ ಜನಾಂಗಕ್ಕೆ, ದೀನದಲಿತರಿಗೆ ಅವರು ನ್ಯಾಯಾಂಗದ ಮೂಲಕ ಸಮಾನತೆ ಕಾಣಲು ಇಡೀ ದೇಶದಲ್ಲಿ ದೊಡ್ಡ ಕ್ರಾಂತಿಯನ್ನು ಮಾಡಿದ್ದಾರೆ. ಇಂತಹ ಮಹಾನ್ ನಾಯಕರನ್ನು ಸ್ಮರಿಸುವಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯುವಂತಾಗಬೇಕು. ಅಂಬೇಡ್ಕರ್ ಅವರ ಜೀವನ ದಾರಿಯನ್ನು ಸಂಪೂರ್ಣವಾಗಿ ವಿದ್ಯಾರ್ಥಿಗಳಲ್ಲಿ ತುಂಬುವಂತಾಗಬೇಕು ಅಂದಾಗ ಮಾತ್ರ ಕಾರ್ಯಕ್ರಮವನ್ನು ಆಚರಿಸಿದ್ದಕ್ಕೆ ಅರ್ಥಬರುತ್ತದೆ. ವಿದ್ಯಾರ್ಥಿಗಳು ಬಸವಣ್ಣ, ಅಂಬೇಡ್ಕರ್, ಕನಕದಾಸರ, ಮಹರ್ಷಿ ವಾಲ್ಮೀಕಿಯವರ ಸೇರಿದಂತೆ ಅನೇಕರ ಇತಿಹಾಸವನ್ನು ಮೆಲಕು ಹಾಕಿ, ತತ್ವಾದರ್ಶಗಳನ್ನು ಅಳವಡಿಸಲು ಮುಂದಾಗಬೇಕು ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಹೇಳಿದರು. ಸಮಾರಂಭ ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರು ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಕುಷ್ಟಗಿಯ ಸಾಹಿತಿ ಪ್ರಮೋದ ತುರ್ವಿಹಾಳ ಅವರು ಡಾ|| ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದರು.           ನಗರಸಭೆ ಸದಸ್ಯರಾದ ಬಾಳಪ್ಪ ಬಾರಕೇರ, ಮುತ್ತುರಾಜ ಕುಷ್ಟಗಿ, ಸರಿತಾ ಹೊಸಮನಿ, ಅಪರ ಜಿಲ್ಲಾಧಿಕಾರಿ ಡಾ|| ಸುರೇಶ ಬಿ.ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಟಿ.ಡಿ. ಪವಾರ್, ಪ್ರಾಚಾರ್ಯ ಎಸ್.ಬಿ.ರಾಜೂರು, ಗಣ್ಯರಾದ ರಾಮಣ್ಣ ಚೌಡ್ಕಿ ಉಪಸ್ಥಿತರಿದ್ದರು.   ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೊಟ್ರಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕೊನೆಯಲ್ಲಿ ವಂದಿಸಿದರು. ಪ್ರಾಚಾರ್ಯ ಸಿ.ವಿ.ಜಡಿಯವರ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕುಷ್ಟಗಿಯ ಚನ್ನಪ್ಪ ಭಾವಿಮನಿ ಹಾಗೂ ಸಂಗಡಿಗರಿಂದ ಡಾ|| ಬಿ.ಆರ್.ಅಂಬೇಡ್ಕರ್ ಕುರಿತು ಗೀತೆಗಳು ಹಾಗೂ ಜಾನಪದ ಗೀತೆಗಳು, ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.

Please follow and like us:
error

Related posts

Leave a Comment