ಸಹಕಾರ ರತ್ಮ ಪ್ರಶಸ್ತಿ : ಪ್ರಸ್ತಾವನೆ ಸಲ್ಲಿಸಲು ಸೂಚನೆ

  ಸಹಕಾರ ಇಲಾಖೆಯು ೨೦೧೨ ನೇ ಸಾಲಿಗೆ ಶ್ರೇಷ್ಠ ಸಹಕಾರಿಗಳನ್ನು ಗುರುತಿಸಿ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲು ಉದ್ದೇಶಿಸಿದ್ದು, ಅರ್ಹರು ತಮ್ಮ ಪ್ರಸ್ತಾವನೆಗಳನ್ನು ಸಲ್ಲಿಸಬಹುದಾಗಿದೆ.
  ಶ್ರೇಷ್ಠ ಸಹಕಾರಿಗಳನ್ನು ಗುರುತಿಸಿ ಸಹಕಾರ ರತ್ನ ಪ್ರಶಸ್ತಿ ನೀಡುವ ಸಲುವಾಗಿ ಶಿಫಾರಸ್ಸು ಮಾಡುವ ಬಗ್ಗೆ ಅಧ್ಯಕ್ಷರು, ರಾಯಚೂರು ಆರ್.ಡಿ.ಸಿ.ಸಿ. ಬ್ಯಾಂಕ್ ನಿ., ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪುನರ್ ರಚಿಸಲಾಗಿದೆ.  ಸಹಕಾರ ಕ್ಷೇತ್ರದಲ್ಲಿ ಕನಿಷ್ಟ ೧೦ ವರ್ಷಗಳ ನಿಷ್ಕಳಂಕ ಸೇವೆ ಸಲ್ಲಿಸಿರುವ ಕೊಪ್ಪಳ ಜಿಲ್ಲೆಯಲ್ಲಿನ ನಿವಾಸಿಗಳು ತಮ್ಮ ವಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವಿವರ, ಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಪೂರಕ ಮಾಹಿತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸಹಕಾರ ಸಂಘಗಳ ಉಪನಿಬಂಧಕರು, ಕೊಪ್ಪಳ ಇವರಿಗೆ ಅ. ೧೦ ರ ಒಳಗಾಗಿ ಸಲ್ಲಿಸಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕ ಕೆ. ಮುನಿಯಪ್ಪ ಅವರು ಎಲ್ಲ ಸಹಕಾರಿಗಳಲ್ಲಿ ಮನವಿ ಮಾಡಿದ್ದಾರೆ.
Please follow and like us:
error