ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ : ಅರ್ಜಿ ಆಹ್ವಾನ

  ಕೊಪ್ಪಳ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ಬದಿಯ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. 
  ಅರ್ಜಿ ಸಲ್ಲಿಸಲಿಚ್ಛಿಸುವವರು ಕೊಪ್ಪಳ ನಗರದ ನಿವಾಸಿಯಾಗಿರಬೇಕು. ನಗರ ವ್ಯಾಪ್ತಿಯಲ್ಲಿ ಮಾತ್ರ ವ್ಯಾಪಾರ ನಡೆಸುತ್ತಿರಬೇಕು. ಅರ್ಜಿದಾರರು ೧೮ ವರ್ಷ ಮೇಲ್ಪಟ್ಟವರಾಗಿರಬೇಕು ಮತ್ತು ಕುಟುಂಬದ ಮುಖ್ಯಸ್ಥರು ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಗಳನ್ನು ಕೊಪ್ಪಳ ನಗರಸಭೆಯಿಂದ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಕುಟುಂಬದ ವಯಸ್ಕ ಸದಸ್ಯರಿರುವ ಕುಟುಂಬದ ಛಾಯಾಚಿತ್ರ, ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ, ಭಾವಚಿತ್ರವಿರುವ ಗುರುತಿನ ಚೀಟಿ(ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಚುನಾವಣಾ ಗುರುತಿನ ಚೀಟಿ), ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ನಕಲು ಪ್ರತಿ ಸಲ್ಲಿಸಬೇಕು ಮತ್ತು ಜುಲೈ.೩೦ ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ. ಗುರುತಿನ ಚೀಟಿಯ ಅವಧಿಯು ಒಂದು ವರ್ಷಕ್ಕೆ ಮಾತ್ರ ಸೀಮಿತವಾಗಿದ್ದು, ಅವಧಿ ಮುಗಿದ ಗುರುತಿನ ಚೀಟಿದಾರರು ನವೀಕರಣಕ್ಕಾಗಿ ಪುನಃ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ನಗರಸಭೆ ಪೌರಾಯುಕ್ತ ರಮೇಶ ಪಟ್ಟೇದ್  ತಿಳಿಸಿದ್ದಾರೆ.

Leave a Reply