ದ್ವಿತೀಯ ಪಿಯುಸಿ ಪರೀಕ್ಷೆ ಸಿದ್ಧತೆ ಮಾ. ೦೨ ರಂದು ಪೂರ್ವಭಾವಿ ಸಭೆ.

ಕೊಪ್ಪಳ ಮಾ. ೦೧ (ಕ ವಾ) ಜಿಲ್ಲೆಯಲ್ಲಿ ಮಾ. ೧೧ ರಿಂದ ಮಾ. ೨೮ ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಜರುಗಲಿದ್ದು, ಪರೀಕ್ಷೆ ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ಮಾ. ೦೨ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಲಿದೆ.
     ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ವಹಿಸುವರು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
Please follow and like us:
error