ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ

 ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಮೀರಾ ಸಿ. ಸಕ್ಸೇನ ಅವರು ಫೆ. ೦೬ ಮತ್ತು ೦೭ ರಂದು ಎರಡು ದಿನಗಳ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
  ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಫೆ. ೬ ರಂದು ಬೆಳಿಗ್ಗೆ ೧೦ ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸಿ, ಸ್ಥಳೀಯ ಕ್ಷೇತ್ರಗಳಿಗೆ ಭೇಟಿ ನೀಡುವರು.  ಸಂಜೆ ೪ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಮಾನವ ಹಕ್ಕುಗಳ ಜಾಗೃತಿ ಸಮಿತಿಯವರು ಏರ್ಪಡಿಸಿರುವ ಜಿಲ್ಲಾ ಸಮಾವೇಶ, ಕಾನೂನು ಅರಿವು ವಿಚಾರ ಸಂಕಿರಣದಲ್ಲಿ ಭಾಗವಹಿಸುವರು.  ನಂತರ ಹೊಸಪೇಟೆಯ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಮಾಡುವರು.  ಫೆ. ೦೭ ರಂದು ಬೆಳಿಗ್ಗೆ ೧೦ ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸಿ, ಸಾರ್ವಜನಿಕ ದೂರು, ಅಹವಾಲುಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.  ನಂತರ ಅದೇ ದಿನ ಮಧ್ಯಾಹ್ನ ೩ ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
Please follow and like us:
error