You are here
Home > Koppal News > ಡಿ.೦೫ ರಿಂದ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು.

ಡಿ.೦೫ ರಿಂದ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು.

ಕೊಪ್ಪಳ, ಡಿ.೦೨ (ಕ ವಾ)  ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ರಿ), ಜಿಲ್ಲಾ ಶಾಖೆ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಹಿತ್ಯ ಭವನದಲ್ಲಿ ಡಿ.೦೫ ಮತ್ತು ೦೬ ರಂದು ಜರುಗಲಿವೆ.
       ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಡಿ.೦೫ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ತ್ಯಾಗರಾಜನ್, ಅಪರ ಜಿಲ್ಲಾಧಿಕಾರಿ ಡಾ|| ಪ್ರವೀಣಕುಮಾರ್ ಜಿ.ಎಲ್, ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ, ಕರ್ನಾಟಕ ರಾಜ್ಯ ಸಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಆರ್.ಜುಮ್ಮಣ್ಣವರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
     ಕಾರ್ಯಕ್ರಮಗಳ ಸಮಾರೋಪ ಸಮಾರಂಭವು ಡಿ.೦೬ ರಂದು ಸಂಜೆ ೬.೦೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯ ಸಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಆರ್.ಜುಮ್ಮಣ್ಣವರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎನ್.ಕೆ. ತೊರವಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಸೋಮಶೇಖರ ಡಿ. ಹರ್ತಿ, ನಗರಸಭೆ ಪೌರಾಯುಕ್ತ ರಮೇಶ ಪಟ್ಟೇದಾರ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ವೈ.ಹೆಚ್. ಲಂಬೂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ||ಶ್ರೀಕಾಂತ ಬಾಸೂರ, ಜಂಟಿ ಕೃಷಿ ನಿರ್ದೇಶಕ ಡಾ. ಎ.ರಾಮದಾಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೊಟ್ರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಸಂತಪ್ರೇಮಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಶ್ಯಾಮಸುಂದರ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಹೆಚ್.ಲಷ್ಕರಿ ನಾಯಕ್, ಪಂಚಾಯತ್ ರಾಜ್ ಇಂಜನೀಯರಿಂಗ್ ವಿಭಾಗದ ಇ.ಇ ಎಂ.ಆರ್.ವಡ್ಡರ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ಕೆ.ಆರ್.ಐ.ಡಿ.ಎಲ್ ಕಾರ್ಯನಿರ್ವಾಹಕ ಅಭಿಯಂತರ ಜೆ.ಎಮ್. ಕೊರಗು, ಅಬಕಾರಿ ಇಲಾಖೆ ಉಪ ಆಯುಕ್ತ ರಾಜಬನ್ಸಿ ಎ.ಎಲ್, ಕೊಪ್ಪಳ ತಹಶೀಲ್ದಾರ್ ಪುಟ್ಟರಾಮಯ್ಯ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಬಿ.ಕಲ್ಲೇಶ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಆರ್.ಎಸ್.ರಾವಳ್, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ಶಶಿಧರ, ಕುಷ್ಟಗಿ ತಾಲೂಕಾ ಸರ್ಕಾರಿ ನೌಕರರ ಅಧ್ಯಕ್ಷ ಗುರಪ್ಪ ಕುರಿ, ಗಂಗಾವತಿ ತಾಲೂಕಾ ಸರ್ಕಾರಿ ನೌಕರರ ಅಧ್ಯಕ್ಷ ವಿಜಯಪ್ರಸಾದ, ಯಲಬುರ್ಗಾ ತಾಲೂಕಾ ಸರ್ಕಾರಿ ನೌಕರರ ಅಧ್ಯಕ್ಷ ವಾಯ್.ಜಿ ಪಾಟೀಲ್, ರಾಜ್ಯ ಸರ್ಕಾರಿ ನೌಕರರ ಸಂಘ ಯೋಜನಾ ಘಟಕ ಮುನಿರಾಬಾದ್‌ನ ಅಧ್ಯಕ್ಷ ಎನ್.ಎಮ್.ಸವದತ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಡಾ|| ಶಾರದಾ ನಿಂಬರಗಿ ಅವರು ತಿಳಿಸಿದ್ದಾರೆ.

Leave a Reply

Top