ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ ಡಿ.  : ಕೊಪ್ಪಳ ಜಿಲ್ಲಾ ನ್ಯಾಯಾಲಯ ಘಟಕದ ವ್ಯಾಪ್ತಿಯಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ೦೨ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
  ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್‌ಸಿ ಉತ್ತೀರ್ಣರಾಗಿದ್ದು ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಹಾಗೂ ಶೀಘ್ರಲಿಪಿ ಪರೀಕ್ಷೆ ತೇರ್ಗಡೆಯಾಗಿರಬೇಕು.  ಶೀಘ್ರಲಿಪಿಗಾರರ ೦೨ ಹುದ್ದೆಗಳ ಪೈಕಿ ಪ.ಜಾತಿ (ಮಹಿಳೆ) ಹಾಗೂ ವರ್ಗ ೨ಎ (ಮಹಿಳೆ)ಗೆ ಮೀಸಲಿರಿಸಲಾಗಿದೆ.  ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ದಿನಾಂಕ: ೧೨-೦೧-೨೦೧೨ ಕೊನೆಯ ದಿನಾಂಕವಾಗಿರುತ್ತದೆ.  ಹೆಚ್ಚಿನ ವಿವರಗಳನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಕಚೇರಿಯಿಂದ ಪಡೆಯಬಹುದಾಗಿದೆ  
Please follow and like us:
error

Related posts

Leave a Comment