ಜಿಲ್ಲಾ ಸಂಯೋಜಕರ ನೇಮಕಕ್ಕೆ ಅರ್ಜಿ ಆಹ್ವಾನ

ಕೊಪ್ಪಳ ಡಿ. : ಸಾಕ್ಷರ ಭಾರತ ಕಾರ್ಯಕ್ರಮದಡಿ ಕೊಪ್ಪಳ ಜಿಲ್ಲಾ ಲೋಕ ಶಿಕ್ಷಣ ಸಮಿತಿಯ ಸ್ವಯಂ ಸೇವಾ ನೆಲೆಯಲ್ಲಿ ಜಿಲ್ಲಾ ಸಂಯೋಜಕರಾಗಿ ಕೆಲಸ ನಿರ್ವಹಿಸಲು ಒಟ್ಟು ೩ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
  ಅರ್ಜಿ ಸಲ್ಲಿಸಲು ಯಾವುದೇ ಪದವಿ ಮತ್ತು ಎಮ್.ಎಸ್.ಡಬ್ಲ್ಯೂ. ಆದವರಿಗೆ ಆದ್ಯತೆ ನೀಡಲಾಗುವುದು.  ಅಲ್ಲದೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ.  ಸಾಕ್ಷರತಾ ಕಾರ್ಯಕ್ರಮದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.  ವಯೋಮಿತಿ ೨೨ ರಿಂದ ೪೫ ವರ್ಷದೊಳಗಿರಬೇಕು, ಪ.ಜಾತಿ, ಪ.ಪಂಗಡ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು.  ಶೇ. ೫೦ ರಷ್ಟು ಸ್ಥಾನ ಮಹಿಳೆಯರಿಗೆ ಮೀಸಲಿರಿಸಲಾಗಿದೆ.  ಆಯ್ಕೆಯಾದವರಿಗೆ ಮಾಹೆಯಾನ ರೂ. ೬೦೦೦ ಗಳ ಗೌರವಧನ ನೀಡಲಾಗುವುದು.  ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವಯಸ್ಕರ ಶಿಕ್ಷಣ ಕಚೇರಿ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಂದ ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ. ೨೨ ರ ಒಳಗಾಗಿ ಸಲ್ಲಿಸುವಂತೆ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳುತಿಳಿಸಿದ್ದಾರೆ.
Please follow and like us:
error