fbpx

ಆ.೨೦ ರಂದು ಅಳವಂಡಿಯಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ.

ಕೊಪ್ಪಳ, ಆ.೧೯ (ಕ ವಾ) ಕ್ಷೇತ್ರ ಪ್ರಚಾರ ನಿರ್ದೇಶನಾಲಯ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಧಾರವಾಡ-ಮೈಸೂರು, ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಪ್ಪಳ ತಾಲೂಕಾ ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ, ಅಳವಂಡಿ ಗ್ರಾಮ ಪಂಚಾಯಿತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಿಷನ್ ಇಂದ್ರಧನುಷ್ ಹಾಗೂ ತಾಯಿ-ಮಗು ಆರೋಗ್ಯ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆ.೨೦ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಅಳವಂಡಿಯ ಶ್ರೀ ಸಿದ್ಧೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕೊಪ್ಪಳ ಲೋಕಸಭಾ ಸಂಸದ ಸಂಗಣ್ಣ ಕರಡಿ ಕಾರ್ಯಕ್ರಮ ಉದ್ಘಾಟಿಸುವರು. ಅಳವಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಕೀರವ್ವ ಜಂತ್ಲಿ ಸಮಾರಂ

ಭದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ತಾಲೂಕಾ ಪಂಚಾಯತ್ ಅಧ್ಯಕ್ಷೆ ಬಾನು ಚಂದುಸಾಬ, ಸದಸ್ಯೆ ಮುದ್ದಮ್ಮ ಕರಡಿ, ಅಳವಂಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಉಮಾ ಕರ್ಕಿಹಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ||ಎಸ್.ಬಿ.ದಾನರಡ್ಡಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ|| ರಮೇಶ ಮೂಲಿಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಿ.ಪಿ.ವಸಂತಪ್ರೇಮಾ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಹಾಗೂ ವೈದ್ಯರಾದ ಡಾ||ಸಿ.ಸಿ.ವಾಚದಮಠ, ಡಾ||ಬಸಂತಕುಮಾರ ಪಾಟೀಲ್, ತಾಲೂಕಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂದಾಕಿನಿ ಆರ್.ಕುಲಕರ್ಣಿ, ಪತ್ರಕರ್ತ ರಾಜಾಸಾಬ ಮುಲ್ಲಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

Please follow and like us:
error

Leave a Reply

error: Content is protected !!