ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ : ೧೬೪೯೫ ವಿದ್ಯಾರ್ಥಿಗಳು ಹಾಜರು

ಕೊಪ್ಪಳ ಏ.  : ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರದಂದು ಜರುಗಿದ ಎಸ್‌ಎಸ್‌ಎಲ್‌ಸಿ ಹಿಂದಿ ವಿಷಯದ ಪರೀಕ್ಷೆಗೆ ೧೬೪೯೫ ವಿದ್ಯಾರ್ಥಿಗಳು ಹಾಜರಾಗಿದ್ದು, ೭೮೦ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
  ಜಿಲ್ಲೆಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಹಿಂದಿ ವಿಷಯದ ಪರೀಕ್ಷೆಗೆ ದಾಖಲಾತಿಯಾಗಿದ್ದ ೧೭೨೧೮ ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ ೧೬೪೫೧ ಹಾಗೂ ೫೭ ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ ೪೪ ಅಭ್ಯರ್ಥಿಗಳು ಹಾಜರಾಗಿದ್ದಾರೆ. ೭೬೭ ರೆಗ್ಯುಲರ್ ಹಾಗೂ ೧೩ ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಒಟ್ಟು ೭೮೦ ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ.  ಜಿಲ್ಲೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ಯಾಮಸುಂದರ್  ತಿಳಿಸಿದ್ದಾರೆ. 

Related posts

Leave a Comment