ಡಿ.೦೪ ರಂದು ಎನ್.ಜಿ.ಓ. ಸಂಸ್ಥೆಗಳ ಸಭೆ

 ಜಿಲ್ಲಾ ಪಂಚಾಯತಿ ಹಾಗೂ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಿಂದ ಡಿ.೦೪ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಎನ್.ಜಿ.ಓ. ಸಂಸ್ಥೆಗಳ ಸಭೆಯನ್ನು ಏರ್ಪಡಿಸಲಾಗಿದೆ. 
ಸಭೆಯಲ್ಲಿ ಕುಡುಂಬಶ್ರೀ ಯೋಜನೆಯಡಿ ಸಮುದಾಯ ಆಧಾರಿತ ಸಂಘಟನೆ/ಸಂಸ್ಥೆ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಭಾಗಿತ್ವದಲ್ಲಿ ಕಾರ್ಯಕ್ರಮ ರೂಪಿಸುವ ಕುರಿತು ಸಬೆ ಏರ್ಪಡಿಸಲಾಗಿದ್ದು, ಎಲ್ಲಾ ಎನ್.ಜಿ.ಓ. ಸಂಸ್ಥೆಯವರು ತಪ್ಪದೇ ಸಭೆಗೆ ಹಾಜರಾಗಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ತಿಳಿಸಿದ್ದಾರೆ.

Leave a Reply