ಕೊಪ್ಪಳ ನೀರನ್ನು ಕುದಿಸಿ, ಆರಿಸಿ ಕುಡಿಯಲು ಮನವಿ.


 ಕೊಪ್ಪಳ, ಅ.೨೧ (ಕ ವಾ) ಕೊಪ್ಪಳ ನಗರಸಭೆ ವತಿಯಿಂದ ನಗರಕ್ಕೆ  ಸರಬರಾಜಾಗುತ್ತಿರುವ ಕುಡಿಯುವ ನೀರನ್ನು ಕಾಯಿಸಿ, ಸೋಸಿ ಕುಡಿಯುವಂತೆ ನಗರಸಭೆ ಅಧ್ಯಕ್ಷರು ಹಾಗೂ ಪೌರಾಯುಕ್ತರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
     ಕೊಪ್ಪಳ ನಗರಕ್ಕೆ ಸರಬರಾಜು ಮಾಡುತ್ತಿರುವ ತುಂಗಭದ್ರಾ ನದಿಯಲ್ಲಿನ ನೀರು ಕೆಲ ದಿನಗಳಿಂದ ಕಲುಷಿತಗೊಂಡಿರುವುದಾಗಿ ತಿಳಿದುಬಂದಿದೆ.  ಸಾರ್ವಜನಿಕರ ಬಳಕೆಗಾಗಿ ನದಿ ನೀರನ್ನು ಶುದ್ಧೀಕರಿಸಿ ನೀಡಲಾಗುತ್ತಿದೆ ಆದರೂ ಸಹ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಕುಡಿಯುವ ನೀರನ್ನು ಕುದಿಸಿ, ಆರಿಸಿ ಕುಡಿಯಬೇಕು ಎಂದು ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ ಹಾಗೂ ಪೌರಾಯುಕ್ತ ರಮೇಶ ಪಟ್ಟೇದಾರ್ ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.
Please follow and like us:
error