ಸ್ವಾತಂತ್ರ್ಯ ದಿನಾಚರಣೆ : ಕಡ್ಡಾಯ ಹಾಜರಾಗಲು ಸೂಚನೆ

  ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.೧೫ ರಂದು ಬೆಳಿಗ್ಗೆ ೮.೦೦ ಗಂಟೆಗೆ ಜಿಲ್ಲಾಡಳಿತ ಭವನದ ಮುಂದುಗಡೆ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಪ್ಪದೇ ಹಾಜರಾಗಬೇಕೆಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.
ಅಲ್ಲದೇ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೯.೦೦ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದ್ದು, ಕಡ್ಡಾಯವಾಗಿ ಎಲ್ಲಾ ಇಲಾಖಾ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಹಾಜರಾಗಬೇಕೆಂದು  ತಿಳಿಸಿದ್ದಾರೆ.

Leave a Reply