You are here
Home > Koppal News > ಬನಾಯೆಂಗೆ ಮಂದಿರ್ ಹಾಡು ನಿಷೇಧ

ಬನಾಯೆಂಗೆ ಮಂದಿರ್ ಹಾಡು ನಿಷೇಧ

 ಗೌರಿ-ಗಣೇಶ ಹಬ್ಬದ ಆಚರಣೆ ಅಂಗವಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿಪಾಲನೆ, ಸಾರ್ವಜನಿಕ ಹಿತಾಸಕ್ತಿ ಹಾಗೂ ಕೋಮು ಸೌಹಾರ್ದತೆಯನ್ನು ಕಾಪಾಡುವ ದೃಷ್ಠಿಯಿಂದ ಕೊಪ್ಪಳ ನಗರದಲ್ಲಿ  ಬನಾಯೆಂಗೆ ಮಂದಿರ್ ಎಂಬ ಹಾಡನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆರ್.ಆರ್.ಜನ್ನು ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪೊಲೀಸ್ ಕಾಯ್ದೆ ೧೯೬೩ ರ ಕಲಂ ೩೫ (೧) ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕೊಪ್ಪಳ ನಗರದಾದ್ಯಂತ ಆ.೨೯ ರಿಂದ ಸೆ.೦೨ ರವರೆಗೆ ಬನಾಯೆಂಗೆ ಮಂದಿರ್ ಎಂಬ ಹಾಡನ್ನು ಸಾರ್ವಜನಿಕವಾಗಿ ಹಾಡದಂತೆ ಮತ್ತು ಆಡಿಯೋ ರೂಪದಲ್ಲಿ ಬಿತ್ತರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Leave a Reply

Top