ಕೊಪ್ಪಳದ ಸ್ನೇಹಲತಾ ಜೋಶಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

  ಕೊಪ್ಪಳದ ಮಹಿಳಾ ಸಾಹಿತಿ ಸ್ನೇಹಲತಾ ಜೋಶಿಗೆ ೨೦೧೧-೧೨ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಲಭಿಸಿದ್ದು, ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ಸ್ನೇಹಲತಾ ಜೋಶಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
  ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಸಮಾರಂಭವೊಂದರಲ್ಲಿ ಕೊಪ್ಪಳದ ಸ್ನೇಹಲತಾ ಜೋಶಿ ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ, ತಮ್ಮ ಕೃತಿಗಳ ಮೂಲಕ ಮಹಿಳಾ ಸಂಘಟನೆಗೆ ಶ್ರಮಿಸಿದ್ದಕ್ಕಾಗಿ ೨೦೧೧-೧೨ನೇ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗಿದ್ದು, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸ್ನೇಹಲತಾ ಜೋಶಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.  ಸ್ನೇಹಲತಾ ಜೋಶಿ ಅವರು ಸುಮಾರು ೩೦ ವರ್ಷಗಳಿಂದ ಕಥೆ, ಕಾದಂಬರಿ, ಕಾವ್ಯ, ಕವನಗಳ ರಚನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ‘ಧೃವ ಮಿಲನ ಮತ್ತು ಸರಿತಾ”, “ಸುಳಿಮಿಂಚು”, “ಪದಕುಸಿಯೇ ನೆಲವಿಹುದು”, “ಮಲ್ಲಿಗೆ ಮುಡಿಯೋ ಸೊಸೆ ಬರಲಿ” ಎಂಬ ಪುಸ್ತಕಗಳನ್ನು ರಚಿಸಿರುತ್ತಾರೆ.  ತಮ್ಮ ಕೃತಿಗಳ ಮೂಲಕ ಮಹಿಳಾ ಸಂಘಟನೆ, ಮಹಿಳಾ ಅಭಿವೃದ್ಧಿ ಮತ್ತು ಜನಜಾಗೃತಿ ಮೂಡಿಸುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.  ಇವರ ಉತ್ತಮ ಸಾಹಿತ್ಯ ಸೇವೆಯನ್ನು ಗುರುತಿಸಿ, ಸರ್ಕಾರವು ಇದೀಗ, ಇವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಿದೆ.
  ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಕಳಕಪ್ಪ ಬಂಡಿ, ಡಾ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ತ್ರಿವಿಕ್ರಮ ಜೋಶಿ, ವಿಧಾನಪರಿಷತ್ ಸದಸ್ಯೆ ವಿಮಲಾಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಮೇಶ್ ಝಳಕಿ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Please follow and like us:
error