ಕೊಪ್ಪಳದಲ್ಲಿ ಸೈನ್ಯ ಭರ್ತಿ ರ್‍ಯಾಲಿ: ಜ. ೨೭ ರಿಂದ ತರಬೇತಿ

  ಭಾರತೀಯ ಭೂಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೊಪ್ಪಳದಲ್ಲಿ ನೇಮಕಾತಿ ರ್‍ಯಾಲಿ ನಡೆಯಲಿದ್ದು, ಜಿಲ್ಲೆಯ ಅಭ್ಯರ್ಥಿಗಳಿಗೆ ಜ. ೨೭ ರಿಂದ ಫೆ. ೦೧ ರವರೆಗೆ ಆರು ದಿನಗಳ ಕಾಲ ವಿಶೇಷ ತರಬೇತಿಯನ್ನು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
  ಸೇನಾ ಭರ್ತಿ ರ್‍ಯಾಲಿ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ. ೩ ರಿಂದ ೧೦ ರವರೆಗೆ ನಡೆಯಲಿದ್ದು, ಜಿಲ್ಲೆಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಆಯ್ಕೆಯಾಗುವಂತೆ ಮಾಡುವ ನಿಟ್ಟಿನಲ್ಲಿ ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲಾ ವ್ಯಾಪ್ತಿಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಜ. ೨೭ ರಿಂದ ಫೆ. ೦೧ ರವರೆಗೆ ಬೆಳಿಗ್ಗೆ ೮ ಗಂಟೆಯಿಂದ ಜಿಲ್ಲೆಯ ಅಭ್ಯರ್ಥಿಗಳಿಗೆ ಪೂರ್ವಭಾವಿ ದೈಹಿಕ ತರಬೇತಿಯನ್ನು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದೆ.  ಜಿಲ್ಲೆಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ತರಬೇತಿಗೆ ಹಾಜರಾಗಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು.  ಹೆಚ್ಚಿನ ವಿವರಗಳಿಗೆ ಕೊಪ್ಪಳ ಜಿಲ್ಲಾ ಉದ್ಯೋಗಾಧಿಕಾರಿ ಬಿ.ಎಫ್ ಬೀರನಾಯ್ಕರ್- ೦೮೫೩೯-೨೨೦೮೫೯  ಕ್ಕೆ ಸಂಪರ್ಕಿಸಬಹುದಾಗಿದೆ  
Please follow and like us:
error