fbpx

ಬೀರಪ್ಪ ಅಂಡಗಿ ಚಿಲವಾಡಗಿ ಹಾಗೂ ಬಾಳಪ್ಪ ಕಾಳೇಯವರಿಗೆ ಸನ್ಮಾನ

 ಯಲಬುರ್ಗಾ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನೂತನ ಪಿಂಚಣಿ ಯೋಜನೆಗೆ ಒಳಪಡುವ ನೌಕರರ ಸಂಘದ ಯಲಬುರ್ಗಾ ತಾಲೂಕ ಘಟಕದ ವತಿಯಿಂದ ಹಮ್ಮಿ

ಕೊಂಡಿದ್ದ ಸಂಘದ ೨ನೇ ವರ್ಷದ  ವಾರ್ಷಿಕೋತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ವ್ಹಾಲಿಬಾಲ್ ಪಂದ್ಯಾವಳಿ ಹಾಗೂ ವಿವಿಧ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ನೂತನ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿಯನ್ನು ಹಾಗೂ ನೂತನ ಪಿಂಚಣಿ ಯೋಜನೆ ಒಳಪಡುವ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಾಳಪ್ಪ ಕಾಳೆಯವರನ್ನು ಯಲಬುರ್ಗಾ ತಾಲೂಕ ಘಟಕದಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮನ್ನವರ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ,ಯಲಬುರ್ಗಾ ತಾಲೂಕ ಘಟಕದ ಅಧ್ಯಕ್ಷರಾದ ವೈ.ಜಿ.ಪಾಟೀಲ,ನೂತನ ಪಿಂಚಣಿ ಯೋಜನೆಗೆ ಒಳಪಡುವ ನೌಕರರ ಸಂಘದ ಯಲಬುರ್ಗಾ ತಾಲೂಕ ಅಧ್ಯಕ್ಷರಾದ ಸಿದ್ದಲಿಂಗಪ್ಪ ಶ್ಯಾಗೋಟಿ,ಕೊಪ್ಪಳ ತಾಲೂಕ ಅಧ್ಯಕ್ಷರಾದ ದೇವಪ್ಪ ಒಂಟಿಗಾರ,ಕುಷ್ಟಗಿ ತಾಲೂಕ ಅಧ್ಯಕ್ಷರಾದ ಬೀರಪ್ಪ ಕುರಿ,ಯಲಬುರ್ಗಾ ತಾಲೂಕ ಪ್ರಾ.ಶಾ.ಶಿ.ಸಂಘದ ಅಧ್ಯಕ್ಷರಾದ ರಾಮಣ್ಣ ತಳವಾರ,ಅ.ಕ.ಪ್ರಾ.ಶಾ.ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷರಾದ ಧರಣಿಕುಮಾರ,ಸ.ಅಂ.ನೌಕರರ ಸಂಘದ ಅಧ್ಯಕ್ಷರಾದ ಮಹೇಶ ಆರೇರ, ಮುಂತಾದವರು ಹಾಜರಿದ್ದರು.
Please follow and like us:
error

Leave a Reply

error: Content is protected !!